ಹೊಸದಿಗಂತ ಡಿಜಿಟಲ್ ಡೆಸ್ಕ್:
ಅತಿದೊಡ್ಡ ಕಾರ್ಯಾಚರಣೆಯಲ್ಲಿ ಬೆಳಗಾವಿ ಪೊಲೀಸರು 43 ಕಿಲೋಗ್ರಾಂ ಗಾಂಜಾ ವಶಪಡಿಸಿಕೊಂಡಿದ್ದಾರೆ. ಈ ದಂಧೆಯ ಪ್ರಮುಖ ಆರೋಪಿ ಸೇರಿದಂತೆ ಆರು ಜನರನ್ನು ಬಂಧಿಸಿದ್ದಾರೆ.
ನಿನ್ನೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪೊಲೀಸ್ ಆಯುಕ್ತ ಭೂಷಣ್ ಗುಲಾಬ್ರಾವ್ ಬೊರಾಸೆ, ಈ ಕಾರ್ಯಾಚರಣೆಯನ್ನು ಸೈಬರ್ ಎಕನಾಮಿಕ್ ಮತ್ತು ನಾರ್ಕೋಟಿಕ್ಸ್ ಇನ್ಸ್‌ಪೆಕ್ಟರ್ ಬಿ.ಆರ್. ಗಡ್ಡೇಕರ್ ನೇತೃತ್ವ ವಹಿಸಿದ್ದರು,
ಮಹಾರಾಷ್ಟ್ರ-ಬೆಳಗಾವಿ ಮಾರ್ಗದ ಹಿಂಡಲ್ಗಾದ ರಸ್ತೆಬದಿಯ ಧಾಬಾ ಬಳಿ ಪೊಲೀಸರು ಎರಡು ಕಾರುಗಳನ್ನು ತಡೆದು ಜಾಲವನ್ನು ಪತ್ತೆಹಚ್ಚಲಾಗಿದೆ.
ಬಂಧಿತರಲ್ಲಿ ಕಣಗಾಲದ ಇಸ್ಮಾಯಿಲ್ ಅಲಿಯಾಸ್ ಸದ್ದಾಂ ಬಾಬು ಸಯ್ಯದ್ (35ವ) ಸೇರಿದ್ದಾರೆ, ಈತ ಕಳೆದ ನಾಲ್ಕು ವರ್ಷಗಳಿಂದ ಬೆಳಗಾವಿಗೆ ಮಾದಕ ದ್ರವ್ಯಗಳನ್ನು ಪೂರೈಸುತ್ತಿರುವ ಮಾಸ್ಟರ್ ಮೈಂಡ್ ಎಂದು ಗುರುತಿಸಲಾಗಿದೆ.