October 15, 2026
Thursday, October 15, 2026
spot_img

ಉಡುಪಿಯಲ್ಲಿ ಡ್ರಗ್ಸ್ ಜಾಲದ ಕೋಟೆಗೆ ಪೊಲೀಸರ ಲಗ್ಗೆ: ಎಂಡಿಎಂಎ, ಹೈಡ್ರೋ ಗಾಂಜಾ ಸೇರಿದಂತೆ 3.31 ಲಕ್ಷ ರೂ. ಮೌಲ್ಯದ ಸೊತ್ತು ಸಹಿತ ಮೂವರ ಸೆರೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕರಾವಳಿ ಭಾಗದ ಉಡುಪಿ, ಕಾಪು, ಮಣಿಪಾಲ ಹಾಗೂ ಕಾರ್ಕಳ ವ್ಯಾಪ್ತಿಯಲ್ಲಿ ನಿಷೇಧಿತ ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ಜಾಲವನ್ನು ಭೇದಿಸಿರುವ ಉಡುಪಿ ಪೊಲೀಸರ ವಿಶೇಷ ತಂಡ ಈ ಸಂಬಂಧ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

ಕಾರ್ಯಾಚರಣೆಯಲ್ಲಿ ಆರೋಪಿಗಳಿಂದ 4 ಗ್ರಾಂ ಎಂಡಿಎಂಎ ಪುಡಿ, 3.65 ಗ್ರಾಂ ಎಂಡಿಎಂಎ ಮಾತ್ರೆಗಳು, 2.5 ಗ್ರಾಂ ಹೈಡ್ರೋಪೋನಿಕ್ ಗಾಂಜಾ, 3 ಗ್ರಾಂ ಗಾಂಜಾ ಹಾಗೂ ಒಂದು ಕಾರು ಸೇರಿದಂತೆ ಒಟ್ಟು 3.31 ಲಕ್ಷ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಇದನ್ನೂ ಓದಿ:

ಬಂಧಿತರನ್ನು ವಿಜಯ್ ಪೂಜಾರಿ (36), ಪಿ.ಎ. ಮಹಮ್ಮದ್ ಸಮ್ಮಸ್ (24) ಹಾಗೂ ಆಕಾಶ್ ಶೆಟ್ಟಿ (20) ಎಂದು ಗುರುತಿಸಲಾಗಿದೆ.

ಶಿವಳ್ಳಿ ಗ್ರಾಮದ ಸಾರ್ವಜನಿಕ ಸ್ಥಳವೊಂದರಲ್ಲಿ ಆರೋಪಿಗಳು ಮಾದಕ ವಸ್ತುಗಳನ್ನು ಸಂಗ್ರಹಿಸಿ ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದರು. ಈ ವೇಳೆ ಆರೋಪಿಗಳು ಸಿಕ್ಕಿಬಿದ್ದಿದ್ದು, ಅವರ ವಶದಿಂದ ವಿವಿಧ ಮಾದಕ ವಸ್ತುಗಳು ಮತ್ತು ಸಾಗಾಟಕ್ಕೆ ಬಳಸಲಾಗುತ್ತಿದ್ದ ಕಾರನ್ನು ವಶಪಡಿಸಿಕೊಳ್ಳಲಾಯಿತು.

Must Read