ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಂತಾರಾಜ್ಯ ಅಕ್ರಮ ಶಸ್ತ್ರಾಸ್ತ್ರ ಕಳ್ಳಸಾಗಣೆ ಜಾಲವನ್ನು ನಡೆಸುತ್ತಿದ್ದ ಆರೋಪದ ಮೇಲೆ ಧಾರ್ ಜಿಲ್ಲೆಯಲ್ಲಿ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿ, ಮಧ್ಯಪ್ರದೇಶದ ಧಾರ್‌ನಲ್ಲಿರುವ ಅಕ್ರಮ ಶಸ್ತ್ರಾಸ್ತ್ರ ಕಾರ್ಖಾನೆಯಿಂದ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಂಡಿದ್ದಾರೆ.
ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಧಾರ್ ಪೊಲೀಸ್ ಅಧೀಕ್ಷಕ ಮನೋಜ್ ಕುಮಾರ್ ಸಿಂಗ್, “ಅಂತರ ರಾಜ್ಯ ಅಕ್ರಮ ಶಸ್ತ್ರಾಸ್ತ್ರ ಕಳ್ಳಸಾಗಣೆಯಲ್ಲಿ ತೊಡಗಿದ್ದ ಗ್ಯಾಂಗ್ ಅನ್ನು ಧಾರ್ ಪೊಲೀಸರು ಇಂದು ಭೇದಿಸಿ ಈ ಗ್ಯಾಂಗ್‌ನಲ್ಲಿದ್ದ ಮೂವರನ್ನು ಬಂಧಿಸಿದ್ದಾರೆ. 149 ದೇಶ ನಿರ್ಮಿತ ಪಿಸ್ತೂಲ್‌ಗಳು, 2 ಪಿಸ್ತೂಲ್‌ಗಳು ಮತ್ತು 13 ಜೀವಂತ ಕಾಟ್ರಿಡ್ಜ್‌ಗಳು ಹಾಗೂ 36 ಲಕ್ಷ ರೂ. ವಶಪಡಿಸಿಕೊಳ್ಳಲಾಗಿದೆ.
ಈ ಗ್ಯಾಂಗ್ ಗುಜರಾತ್, ರಾಜಸ್ಥಾನ, ದೆಹಲಿ ಮತ್ತು ಹರಿಯಾಣದಲ್ಲಿ ಜಾಲವನ್ನು ನಡೆಸುತ್ತಿದ್ದು, ಪ್ರಕರಣದ ಪ್ರಮುಖ ಆರೋಪಿಯನ್ನು ಈಶ್ವರ್ ಎಂದು ಗುರುತಿಸಲಾಗಿದೆ. ಪ್ರಧಾನ ಆರೋಪಿ ಈಶ್ವರ್ 24 ಪ್ರಕರಣಗಳಲ್ಲಿ ಬೇಕಾಗಿದ್ದಾನೆ. ಶಸ್ತ್ರಾಸ್ತ್ರಗಳನ್ನು ಸರಬರಾಜು ಮಾಡಿದ ಸ್ಥಳಗಳ ಕುರಿತು ನಾವು ತನಿಖೆ ನಡೆಸುತ್ತಿರುವುದಾಗಿ ಮನೋಜ್ ತಿಳಿಸಿದರು.