ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾಂಗ್ರೆಸ್ ಹಿರಿಯ ನಾಯಕ ದಿಗ್ವಿಜಯ್ ಸಿಂಗ್ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಈ ಹಿಂದಿನ ಸರಸಂಘ ಚಾಲಕರಾಗಿದ್ದ ದಿವಂಗತ ಎಂಎಸ್ ಗೋಳ್ವಾಲ್ಕರ್ ವಿರುದ್ಧ ಸಾಮಾಜಿಕ ಮಾಧ್ಯಮದಲ್ಲಿ ವಿವಾದಾತ್ಮಕ ಪೋಸ್ಟ್ ಹಂಚಿಕೊಂಡಿದ್ದಕ್ಕಾಗಿ ದಿಗ್ವಿಜಯ್ ಸಿಂಗ್ ವಿರುದ್ಧ ಇಂದೋರ್ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಸ್ಥಳೀಯ ವಕೀಲ ಮತ್ತು ಆರ್‌ಎಸ್‌ಎಸ್ ಕಾರ್ಯಕರ್ತ ರಾಜೇಶ್ ಜೋಶಿ ಅವರು ಸಲ್ಲಿಸಿದ ದೂರಿನ ಮೇರೆಗೆ ಶನಿವಾರ ರಾತ್ರಿ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 153-ಎ ಅಡಿಯಲ್ಲಿ ಸಿಂಗ್ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಸೆಕ್ಷನ್ 469, ಮಾನನಷ್ಟ ಮತ್ತು 505 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ತುಕೋಗಂಜ್ ಪೊಲೀಸ್ ಠಾಣಾಧಿಕಾರಿ ತಿಳಿಸಿದ್ದಾರೆ.
ಗೋಳ್ವಾಲ್ಕರ್ ಪೋಸ್ಟರ್‌ನೊಂದಿಗೆ ಜನರನ್ನು ಪ್ರಚೋದಿಸಿದ ಆರೋಪದ ಮೇಲೆ ದಿಗ್ವಿಜಯ್ ವಿರುದ್ಧ ಪೊಲೀಸ್ ಪ್ರಕರಣ ದಾಖಲಾಗಿದೆ. ಪ್ರಕರಣದ ತನಿಖೆ ನಡೆಸುವುದಾಗಿ ಪೊಲೀಸರು ತಿಳಿಸಿದ್ದಾರೆ.