ಫಾಝಿಲ್ ಹತ್ಯೆ: ಶುಕ್ರವಾರದ ಪ್ರಾರ್ಥನೆ ಮನೆಯಲ್ಲೇ ನೆರವೇರಿಸಲು ಪೊಲೀಸ್ ಆಯುಕ್ತರ ಮನವಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಕರಾವಳಿಯಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿರುವ ಹಿನ್ನಲೆಯಲ್ಲಿ ಕಾನೂನು ಸುವ್ಯವಸ್ಥೆಯ ಹಿತದೃಷ್ಟಿಯಿಂದ ಶುಕ್ರವಾರದ ಪ್ರಾರ್ಥನೆಯನ್ನು ಮನೆಯಲ್ಲಿಯೇ ನಡೆಸುವಂತೆ ನಗರ ಮುಸ್ಲಿಮರಿಗೆ ಮಂಗಳೂರು ನಗರ ಪೊಲೀಸ್ ಆಯುಕ್ತ ಶಶಿಕುಮಾರ್ ಮನವಿ ಮಾಡಿದ್ದಾರೆ.

ಸುರತ್ಕಲ್ ನಲ್ಲಿ ಗುರುವಾರ ರಾತ್ರಿ ನಡೆದ ಮಂಗಲಪೇಟೆ ನಿವಾಸಿ ಮೊಹಮ್ಮದ್ ಫಾಝಿಲ್ ಹತ್ಯೆ ಬಳಿಕ‌ ಮುನ್ನೆಚ್ಚರಿಕಾ ಕ್ರಮವಾಗಿ ಈಗಾಗಲೇ ನಾಲ್ಕು ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಶನಿವಾರದವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಜೊತೆಗೆ ಮಂಗಳೂರು ನಗರ ಕಮಿಷನರೇಟ್ ವ್ಯಾಪ್ತಿಯ ಪ್ರಮುಖ ಪ್ರದೇಶಗಳಲ್ಲಿ ಸೆಕ್ಷನ್ 144 ರ ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಯಲ್ಲಿದೆ.

ನಾಗರೀಕರು ಯಾವುದೇ ಕಾರಣಕ್ಕೂ ಅಶಾಂತಿಗೆ ದಾರಿ ಮಾಡಿಕೊಡಬಾರದು ಎಂದು ಅವರು ಮನವಿ ಮಾಡಿರುವ ಅವರು,‌ ಶುಕ್ರವಾರದ ಪ್ರಾರ್ಥನೆ ತಮ್ಮ ಸನಿಹದ ಮಸೀದಿಯಲ್ಲಿ ಜಾಸ್ತಿ ಜನ ಸೇರದಂತೆ, ಅಥವಾ ತಮ್ಮ ಮನೆಯಲ್ಲಿಯೇ ನೆರೆವೇರಿಸುವಂತೆ ಅವರು ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!