ಯುವ ಪೊಲೀಸ್ ಸಿಬ್ಬಂದಿಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಪೊಲೀಸ್​ ಸಿಬ್ಬಂದಿಯೋರ್ವ ನೇಣಿಗೆ ಶರಣಾಗಿರುವ ಘಟನೆ ಹುಬ್ಬಳ್ಳಿಯ ಬೆಂಡಿಗೇರಿಯ ದೊಡ್ಡಮನಿ ಕಾಲನಿಯಲ್ಲಿ ನಡೆದಿದೆ.

ಮಲ್ಲಿಕಾರ್ಜುನ ರುದ್ರಾಪುರ (26) ಆತ್ಮಹತ್ಯೆ ಮಾಡಿಕೊಂಡ ಪೊಲೀಸ್‌ ಸಿಬ್ಬಂದಿ. ಇವರು ಬೆಳಗಾವಿಯ ಸಂಗೊಳ್ಳಿ ಗ್ರಾಮದ ನಿವಾಸಿಯಾಗಿದ್ದು, ಬೆಂಡಿಗೇರಿ ಪೊಲೀಸ್​​ ಠಾಣೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದರು. ಆತ್ಮಹತ್ಯೆ ಮಾಡಿಕೊಳ್ಳಲು ನಿಖರ ಕಾರಣ ಏನು ಎಂದು ತಿಳಿದುಬಂದಿಲ್ಲ.

ವಿಷಯ ತಿಳಿದ ಕೂಡಲೇ ಘಟನಾ ಸ್ಥಳಕ್ಕೆ ಬೆಂಡಿಗೇರಿ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!