ಹೊಸದಿಗಂತ ಡಿಜಿಟಲ್ ಡೆಸ್ಕ್:
ಇತ್ತೀಚೆಗೆ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ಹೆಚ್ಚಾಗಿದ್ದು, ಪೊಲೀಸ್ ಸಿಬ್ಬಂದಿ ಕೂಡ ಬಲಿಯಾಗುತ್ತಿರುವುದನ್ನು ಕಾಣಬಹುದು. ಇದೇ ರೀತಿಯಾಗಿ ಮಲಗಿದ್ದಲ್ಲೇ ಹೃದಯಾಘಾತದಿಂದ ಪೊಲೀಸ್ ಸಿಬ್ಬಂದಿ ಕೊನೆಯುಸಿರೆಳೆದಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ.
ರಾಯಚೂರು ಜಿಲ್ಲೆ ಮಸ್ಕಿ ಠಾಣೆಯಲ್ಲಿ ರೈಟರ್ ಆಗಿ ಸೇವೆ ಸಲ್ಲಿಸುತ್ತಿದ್ದ ಬಸನಗೌಡ (34) ಮೃತ ದುರ್ದೈವಿ.
ಬಸನಗೌಡ ಕೆಲಸ ಮುಗಿಸಿಕೊಂಡು ಮನೆಗೆ ಬಂದು ರಾತ್ರಿ ಮಲಗಿದ್ದಾರೆ. ಮಲಗಿದ್ದಲ್ಲೇ ಹೃದಯಾಘಾತದಿಂದ ಪ್ರಾಣ ಬಿಟ್ಟಿದ್ದಾರೆ.
ಬಸನಗೌಡಗೆ ಬಿಪಿ, ಶುಗರ್ ಅಥವಾ ಯಾವುದೇ ಹೃದಯ ಸಂಬಂಧಿ ಖಾಯಿಲೆ ಇರಲಿಲ್ಲ, ಆದರೂ ಏಕಾಏಕಿ ಸಾವನ್ನಪ್ಪಿದ್ದಾರೆ. ಮೂಲತಃ ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ಆಗೋಲಿ ಗ್ರಾಮದ ನಿವಾಸಿಯಾದ ಬಸನಗೌಡ ಅವರ ಸಾವಿಗೆ ರಾಯಚೂರು ಜಿಲ್ಲಾ ಪೊಲೀಸ್ ಇಲಾಖೆ ಸಂತಾಪ ಸೂಚಿಸಿದೆ.