October 13, 2026
Tuesday, October 13, 2026
spot_img

ಪೊಲೀಸ್ ಕಾನ್ಸ್‌ಟೆಬಲ್ ಪರೀಕ್ಷೆ ಗೊಂದಲ: ಪ್ರಿಯಾಂಕ್‌ ಖರ್ಗೆ ರಾಜೀನಾಮೆಗೆ ಸಿ.ಟಿ. ರವಿ ಆಗ್ರಹ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆಯಲ್ಲಿ ಉಂಟಾದ ಗೊಂದಲದ ಪರಿಣಾಮ ಬಿಜೆಪಿ ಪರಿಷತ್‌ ಸದಸ್ಯ ಸಿ.ಟಿ ರವಿ,‌ ಗೃಹ ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ಸೋಷಿಯಲ್‌ ಮೀಡಿಯಾ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, OMR ಶೀಟ್ ಗೊಂದಲ ಮತ್ತು ಅಸಮರ್ಥ ವ್ಯವಸ್ಥೆಯಿಂದ ಸಾವಿರಾರು ಅಭ್ಯರ್ಥಿಗಳ ಭವಿಷ್ಯ ಸಂಕಷ್ಟಕ್ಕೆ ಸಿಲುಕಿದೆ ಎಂದು ಆರೋಪಿಸಿದ್ದಾರೆ.ಅಭ್ಯರ್ಥಿಗಳು ನಡೆಸಿರುವ ಪ್ರತಿಭಟನೆ ರಾಜ್ಯ ಸರ್ಕಾರದ ವೈಫಲ್ಯಕ್ಕೆ ನೀಡಿರುವ ಇನ್ನೊಂದು ಸರ್ಟಿಫಿಕೇಟ್. ರಾಜ್ಯದ ಗೃಹ ಸಚಿವರು ಬೇರೆಯವರಿಗೆ ಸರ್ಟಿಫಿಕೇಟ್ ಕೊಡುತ್ತಾ, ತನ್ನ ಇಲಾಖೆಯ ಕೆಲಸವನ್ನು ಕಡೆಗಣಿಸಿದ್ದರಿಂದ ಇಂತಹ ಸ್ಥಿತಿ ಬಂದಿದೆ ಎಂದು ಟೀಕಿಸಿದ್ದಾರೆ.

Must Read