ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯ ಮತ್ತು ರಾಷ್ಟ್ರೀಯ ಹೆದ್ದಾರಿಗಳಲ್ಲಿ ಹೆಲ್ಮೆಟ್ ಧರಿಸದ ದ್ವಿಚಕ್ರ ವಾಹನ ಚಾಲಕರಿಗೆ ಪೊಲೀಸರು ಕೌನ್ಸಿಲಿಂಗ್ ಸೆಷನ್ಸ್ ಗಳನ್ನು ಪ್ರಾರಂಭಿಸಿದ್ದಾರೆ. ದ್ವಿಚಕ್ರ ವಾಹನ ಸವಾರರಿಗೆ ಹೆಲ್ಮೆಟ್ ಧರಿಸುವುದರ ಪ್ರಾಮುಖ್ಯತೆ ಮತ್ತು ಇತರ ಸುರಕ್ಷಿತ ಕ್ರಮಗಳ ಬಗ್ಗೆ ಅರಿವು ಮೂಡಿಸುವುದು ಇದರ ಗುರಿಯಾಗಿದೆ.
ಈ ಸೆಷನ್ಸ್ ಎರಡು ತಿಂಗಳ ಕಾಲ ನಡೆಯಲಿದ್ದು, ನವೆಂಬರ್ 1 ರಿಂದ ಹೆಲ್ಮೆಟ್ ಧರಿಸದವರನ್ನು ಗುರಿಯಾಗಿಸಲು ಪೊಲೀಸರು ವಿಶೇಷ ಕಾರ್ಯಾಚರಣೆಯನ್ನು ಆರಂಭಿಸಲಿದ್ದಾರೆ. ರಸ್ತೆ ಬಳಕೆದಾರರಲ್ಲಿ ದ್ವಿಚಕ್ರ ವಾಹನ ಸವಾರರ ಸಾವಿನ ಪ್ರಮಾಣ ಹೆಚ್ಚಿರುವುದರಿಂದ ಪೊಲೀಸರು ಈ ಉಪಕ್ರಮವನ್ನು ಕೈಗೊಂಡಿದ್ದಾರೆ.
ರಾಜ್ಯದಲ್ಲಿ ಮಾರಣಾಂತಿಕ ಅಪಘಾತಗಳಲ್ಲಿ ಸ್ವಲ್ಪ ಇಳಿಕೆ ಕಂಡುಬಂದಿದೆ. ಹೆಲ್ಮೆಟ್ ಧರಿಸಬೇಕು ಎಂಬುದು ಜನರಿಗೆ ತಿಳಿದಿದೆ. ಆದರೆ ಹಾಗೆ ಮಾಡುತ್ತಿಲ್ಲ. ರಾಜ್ಯದಾದ್ಯಂತ, ಹೆಲ್ಮೆಟ್‌ಗಳ ಪ್ರಾಮುಖ್ಯತೆ ಮತ್ತು ಸುರಕ್ಷಿತ ಕ್ರಮಗಳ ಕುರಿತು ಅವರಿಗೆ ಶಿಕ್ಷಣ ನೀಡಲು ಪೊಲೀಸರು ಸೆಷನ್‌ಗಳನ್ನು ನಡೆಸುತ್ತಿದ್ದಾರೆ