ಹೊಸದಿಗಂತ ವರದಿ ಶಿವಮೊಗ್ಗ:
ಹೊಸನಗರ ತಾಲೂಕಿನ ಪಟಗುಪ್ಪ ಸೇತುವೆ ಸಮೀಪದಲ್ಲಿ ಗೋವಿನ ಕತ್ತು ಸೀಳಿದ ಪ್ರಕರಣಕ್ಕೆ ಸಂಬಂಧಿಸಿ ನಾಲ್ವರು ಆರೋಪಿಗಳನ್ನು ಪೋಲಿಸರು ಪೋಲಿಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ಹಾವೇರಿ ಜಿಲ್ಲೆಯ ಹಾನಗಲ್ ತಾಲ್ಲೂಕಿನ ಅಕ್ಕಿ ಆಲೂರು ಗ್ರಾಮದ ಮಹಮದ್ ಸಲೀಂ ಬಾಳೂರ್ (34) ಮಕಬುಲ್ ಅಹ್ಮದ್ ಬಡಿಗೇರ (22) ಸುಲೇಮಾನ್ ಕೋಲಾರಿ (26) –ಹಾಗೂ ಮಲ್ಲಿಕ್ ರಿಹಾನ್ (25) ಎಂದು ಗುರುತಿಸಲಾಗಿದೆ.
ಹೊಸನಗರ ತಾಲ್ಲೂಕಿನ ಹೊಸಕೊಪ್ಪ ಗ್ರಾಮದ ಪಟಗುಪ್ಪ ಸೇತುವೆ ಸಮೀಪದ ಶರಾವತಿ ಹಿನ್ನೀರಿನ ಪ್ರದೇಶದಲ್ಲಿ ದುಷ್ಕರ್ಮಿಗಳು ಹಸುವಿನ ಕರುವನ್ನು ಹತ್ಯೆ ಮಾಡಿ ಮಾಂಸ ಮಾರಾಟ ಮಾಡುವ ಉದ್ದೇಶದಿಂದ ಸ್ಥಳದಿಂದ ಪರಾರಿಯಾಗಿದ್ದರು. ಈ ಸಂಬಂಧ ಹೊಸನಗರ ಪೊಲೀಸ್ ಠಾಣೆಯ ಸಿಪಿಸಿ ಗೋಪಾಲಕೃಷ್ಣ ನೀಡಿದ ದೂರಿನ ಮೇರೆಗೆ ಗುನ್ನೆ ಸಂಖ್ಯೆ 67/2026 ದಾಖಲಿಸಿ, ಕರ್ನಾಟಕ ಜಾನುವಾರು ಹತ್ಯೆ ನಿಷೇಧ ಮತ್ತು ಸಂರಕ್ಷಣಾ ಕಾಯ್ದೆ–2020ರ ಕಲಂ 4, 7, 12 ಹಾಗೂ ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಕಾಯ್ದೆಯ ಕಲಂ 11(1)(ಡಿ) ಅಡಿಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿತ್ತು.
ಜಿಲ್ಲಾ ಪೊಲೀಸ್ ಅಧೀಕ್ಷಕರು, ಹೆಚ್ಚುವರಿ ಪೊಲೀಸ್ ಅಧೀಕ್ಷಕರು ಹಾಗೂ ತೀರ್ಥಹಳ್ಳಿ ಉಪವಿಭಾಗದ ಪೊಲೀಸ್ ಉಪಾಧೀಕ್ಷಕರ ಮಾರ್ಗದರ್ಶನದಲ್ಲಿ, ಹೊಸನಗರ ವೃತ್ತದ ಪೊಲೀಸ್ ವೃತ್ತ ನಿರೀಕ್ಷಕ ಎಂ.ಐ. ಗೌಡಪ್ಪಗೌಡ್ರ ಅವರ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ ರಚಿಸಿ ಕಾರ್ಯಾಚರಣೆ ನಡೆಸಲಾಯಿತು.
ಇದನ್ನೂ ಓದಿ:
ಕಾರ್ಯಾಚರಣೆಯಲ್ಲಿ ಹೊಸನಗರ ಠಾಣೆಯ ಪಿಎಸ್‌ಐ ಶಂಕರಗೌಡ ಪಾಟೀಲ್, ರಿಪ್ಪನ್‌ಪೇಟೆ ಠಾಣೆಯ ಪಿಎಸ್‌ಐ ರಾಜುರೆಡ್ಡಿ, ನಗರ ಠಾಣೆಯ ಪಿಎಸ್‌ಐ ಶಿವಾನಂದ ವೈ.ಕೆ., ಪೊಲೀಸ್ ಸಿಬ್ಬಂದಿ ಹಾಗೂ ಶಿವಮೊಗ್ಗ ಎಎನ್‌ಸಿ ವಿಭಾಗದ ಅಧಿಕಾರಿಗಳ ಸಹಕಾರದೊಂದಿಗೆ ಜುಲೈ 4ರಂದು ನಾಲ್ವರು ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾದರು.
ಬಂಧಿತ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ ಎಂದು ಹೊಸನಗರ ಪೊಲೀಸರು ತಿಳಿಸಿದ್ದಾರೆ.
ಕಾರ್ಯಾಚರಣೆಯಲ್ಲಿ ಹೊಸನಗರ ಠಾಣೆಯ ಸಿಬ್ಬಂದಿಗಳಾದ ಕಿರಣ್ ಕುಮಾರ್ ಡಿ.ವೈ., ಶಿವಕುಮಾರನಾಯ್ಕ, ಮಾಯಪ್ಪ ಗೋಕಾವಿ, ರವಿಚಂದ್ರ, ಸುನಿಲ್, ಗೋಪಾಲಕೃಷ್ಣ , ಮಧುಸೂಧನ್ , ಜಗದೀಶ್ ಹಾಗೂ ಶಿವಮೊಗ್ಗ ಎಎನ್‌ಸಿ ವಿಭಾಗದ ಗುರುರಾಜ ಮತ್ತು ಇಂದೇಶ ಭಾಗವಹಿಸಿದ್ದರು.



