ಪರಿಷತ್ ಸದಸ್ಯ ಕೆ.ಎಸ್.ನವೀನ್ ಮನವಿಗೆ ಪೊಲೀಸ್ ಇಲಾಖೆ ಸ್ಪಂದನೆ: ಹಳೆಯ ವಾಹನಗಳ ತೆರವು

ಹೊಸದಿಗಂತ ವರದಿ,ಚಿತ್ರದುರ್ಗ:

ನಗರದ ಹಲವೆಡೆ ಸಾರ್ವಜನಿಕ ಸ್ಥಳಗಳಲ್ಲಿ ಬಹಳ ವರ್ಷಗಳಿಂದ ಕೆಟ್ಟು ನಿಂತಿದ್ದ ನೂರಾರು ಹಳೆಯ ವಾಹನಗಳನ್ನು ಮಂಗಳವಾರ ಪೊಲೀಸ್ ಇಲಾಖೆ ತೆರವುಗೊಳಿಸಿದೆ.
ನಗರದ ಚಂದ್ರವಳ್ಳಿ ರಸ್ತೆ, ಚಳ್ಳಕೆರೆ ಗೇಟ್, ರಾಷ್ಟ್ರೀಯ ಹೆದ್ದಾರಿ-೧೩ ಸೇರಿದಂತೆ ಚಿತ್ರದುರ್ಗದ ವಿವಿಧೆಡೆಯ ಸಾರ್ವಜನಿಕ ಸ್ಥಳಗಳಲ್ಲಿ ಬಹಳ ವರ್ಷಗಳಿಂದ ಕೆಟ್ಟು ನಿಂತಿದ್ದ ಹಳೆಯ ವಾಹನಗಳನ್ನು ತೆರವುಗೊಳಿಸುಂತೆ ವಿಧಾನ ಪರಿಷತ್ ಸದಸ್ಯರಾದ ಕೆ.ಎಸ್.ನವೀನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಪರಶುರಾಮ್ ಅವರಿಗೆ ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆಯಿಂದ ತೆರವಿಗೆ ಕ್ರಮಕೈಗೊಳ್ಳಲಾಯಿತು.
ಪೊಲೀಸ್ ಸಿಬ್ಬಂದಿ ಇಲಾಖೆಯ ವಾಹನಗಳ ಸಹಾಯದೊಂದಿಗೆ ಸಾರ್ವಜನಿಕ ಸ್ಥಳಗಳಲ್ಲಿ ಕೆಟ್ಟು ನಿಂತಿದ್ದ ನೂರಾರು ವಾಹನಗಳನ್ನು ತೆರವುಗೊಳಿದರು. ಈ ಮೂಲಕ ಸಾರ್ವಜನಿಕರ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.
ಮನವಿಗೆ ಸ್ಪಂದಿಸಿ ತ್ವರಿತಗತಿಯಲ್ಲಿ ನೂರಾರು ಹಳೆಯ ವಾಹನಗಳನ್ನು ತೆರವುಗೊಳಿಸಿದ್ದಕ್ಕಾಗಿ ವಿಧಾನ ಪರಿಷತ್ ಸದಸ್ಯರಾದ ಕೆ.ಎಸ್.ನವೀನ್ ಅವರು ಪೊಲೀಸ್ ಇಲಾಖೆಗೆ ಅಭಿನಂದಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!