Wednesday, June 7, 2023

Latest Posts

ಕಾಂಗ್ರೆಸ್‌ ಪ್ರಣಾಳಿಕೆ ವಿರೋಧಿಸಿ ಪ್ರತಿಭಟನೆ: ಬಜರಂಗದಳ ಕಾರ್ಯಕರ್ತರ ಬಂಧನ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ದೇಶದೆಲ್ಲೆಡೆ ಬಜರಂಗದಳ ಕಾರ್ಯಕರ್ತರು ಕರ್ನಾಟಕ ಕಾಂಗ್ರೆಸ್‌ ವಿರುದ್ಧ ಸಿಟ್ಟಿಗೆದ್ದಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಬಜರಂಗದಳ ಬ್ಯಾನ್‌ ಮಾಡುತ್ತೇವೆ ಎಂಬ ಪ್ರಣಾಳಿಕೆ ಬಿಡುಗಡೆಯಾದಾಗಿನಿಂದ ದೇಶದಲ್ಲಿ ಒಂದಲ್ಲಾ ಒಂದು ಕಡೆ ಪ್ರತಿಭಟನೆಗಳು ನಡೆಯುತ್ತಲೇ ಇವೆ.

ಇಂದು ಕರ್ನಾಟಕ ಚುನಾವಣಾ ಪ್ರಣಾಳಿಕೆ ವಿರೋಧಿಸಿ ಹೈದರಾಬಾದ್‌ನಲ್ಲಿ ಕಾಂಗ್ರೆಸ್ ಪಕ್ಷದ ಕಚೇರಿ ಎದುರು ಪ್ರತಿಭಟನೆ‌ ಬಜರಂಗದಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಧರಣಿ ನಡೆಸುತ್ತಿದ್ದ ಬಜರಂಗದಳದ ಕಾರ್ಯಕರ್ತರನ್ನು ಪೊಲೀಸರು ಅಟ್ಟಾಡಿಸಿಕೊಂಡು ಹೋಗಿ ಬಂಧಿಸಿದ್ದಾರೆ. ಕಾರ್ಯಕರ್ತರು ಕಾಂಗ್ರೆಸ್‌ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ಹೊರಹಾಕಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!