ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರು ಗ್ರಾಮಾಂತರ ಪ್ರದೇಶದಲ್ಲಿ ಹೆದ್ದಾರಿಯಲ್ಲಿ ದರೋಡೆ ಮಾಡುತ್ತಿದ್ದ ರೌಡಿ ಶೀಟರ್ ಕಾಲಿಗೆ ಕಂಬಾಳು ಗ್ರಾಮದ ಬಳಿ ದಾಬಸ್ಪೇಟೆ ಠಾಣೆಯ ಇನ್ಸ್ಪೆಕ್ಟರ್ ಬಿ.ರಾಜು ಫೈರಿಂಗ್ ಮಾಡಿದ್ದಾರೆ.
ಬಂಧಿಸಲು ತೆರಳಿದ್ದ ವೇಳೆ ಹೆಡ್ ಕಾನ್ಸ್ಟೇಬಲ್ ಇಮ್ರಾನ್ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನಿಸಿದ್ದ. ಈ ವೇಳೆ ಪೊಲೀಸರು ಕಾಲಿಗೆ ಗುಂಡೇಟು ನೀಡಿ, ಬಂಧಿಸಿರುವುದಾಗಿ ತಿಳಿದು ಬಂದಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲ್ಲೂಕಿನ ದಬಾಸ್ ಪೇಟೆಯ ಬಳಿಯಲ್ಲಿ ರೌಡಿ ಶೀಟರ್ ಜಯಂತ್ ಎಂಬಾತ ಇದ್ದಂತ ಸ್ಥಳದ ಮಾಹಿತಿ ಪೊಲೀಸರಿಗೆ ಸಿಕ್ಕಿದೆ. ಮಾಹಿತಿ ಆಧರಿಸಿ, ರೌಡಿ ಶೀಟರ್ ಜಯಂತ್ ಬಂಧಿಸೋದಕ್ಕೆ ಪೊಲೀಸರು ತೆರಳಿದ್ದಾರೆ. ಈ ಸಂದರ್ಭಹೆಡ್ ಕಾನ್ ಸ್ಟೇಬಲ್ ಇಮ್ರಾನ್ ಖಾನ್ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ್ದಾನೆ. ಈ ವೇಳೆ ಇನ್ಸ್ ಪೆಕ್ಟರ್ ರಾಜು ಅವರು ರೌಡಿ ಶೀಟರ್ ಜಯಂತ್ ಕಾಲಿಗೆ ಗುಂಡೇಟು ನೀಡಿದ್ದಾರೆ. ಗುಂಡೇಟಿನಿಂದ ಗಾಯಗೊಂಡಿದ್ದ ಆತನನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ.
ಪಲ್ಸರ್ ಬೈಕ್ನಲ್ಲಿ ಬಂದು ದರೋಡೆಗೆ ಯತ್ನಿಸಿದ್ದ ಆರೋಪಿ ಜಯಂತ್, ಕೊಲೆ, ಕೊಲೆ ಯತ್ನ, ದರೋಡೆ ಸೇರಿ 56 ಪ್ರಕರಣಗಳಲ್ಲಿ ಭಾಗಿಯಾಗಿದ್ದಾನೆ.