ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ರಾಗಿಹಳ್ಳಿ ಬಳಿ ನಟೋರಿಯಸ್ ರೌಡಿಶೀಟರ್ ವೆಂಕಟರಾಜು ಅಲಿಯಾಸ್ ತುಕಡಿ ಮೇಲೆ ಜಿಗಣಿ ಇನ್ಸ್ ಪೆಕ್ಟರ್ ಮಂಜುನಾಥ್ ಫೈರಿಂಗ್ ಮಾಡಿ, ಬಂಧಿಸಿದ್ದಾರೆ.
ಆತನನ್ನು ಅರೆಸ್ಟ್ ಮಾಡಲು ಹೋದಾಗ ಕ್ರೈಂ ಸಿಬ್ಬಂದಿ ವಿನಯ್ ಮೇಲೆ ಮಾರಕಾಸ್ತ್ರಗಳಿಂದ ದಾಳಿ ಮಾಡಿದ್ದಾನೆ. ಈ ವೇಳೆ ಆತ್ಮರಕ್ಷಣೆಗಾಗಿ ಫೈರಿಂಗ್ ಮಾಡಲಾಗಿದೆ.
ಶರಣಾಗುವಂತೆ ಆತನಿಗೆ ವಾರ್ನಿಂಗ್ ಮಾಡಲಾಗಿದ್ದರೂ, ಮಾರಕಾಸ್ತ್ರಗಳಿಂದ ಪೊಲೀಸರ ಮೇಲೆ ಹಲ್ಲೆ ಮಾಡಿ ತಪ್ಪಿಸಿಕೊಳ್ಳಲು ಯತ್ನಿಸಿದಾಗ ಪೊಲೀಸರು ಗುಂಡು ಹಾರಿಸಿದ್ದಾರೆ.
ಎರಡು ತಿಂಗಳ ಹಿಂದೆ ರೌಡಿಶೀಟರ್ ವೆಂಕಟರಾಜು ಶೆಟ್ಟಿಹಳ್ಳಿ ಸಮೀಪ ಕೊಲೆ ಯತ್ನ ನಡೆಸಿದ್ದ. ಅತ್ತಿಬೆಲೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಕೊಲೆ, ಕೊಲೆ ಯತ್ನ ಪ್ರಕರಣಗಳಲ್ಲಿ ಬೇಕಾಗಿದ್ದ ವೆಂಕಟರಾಜು ಹತ್ತಕ್ಕೂ ಹೆಚ್ಚು ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದು, ಕೆಲವು ದಿನಗಳಿಂದ ತಲೆಮರೆಸಿಕೊಂಡಿದ್ದನು.