ಕೊಲೆ, ಸುಲಿಗೆ ಪ್ರಕರಣಗಳ ಪ್ರಮುಖ ಆರೋಪಿ ಸೆರೆ: ಮಾರಕಾಸ್ತ್ರಗಳು ವಶ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಹಲವು ಕೊಲೆ, ಸುಲಿಗೆ ಪ್ರಕರಣಗಳಲ್ಲಿ ಪ್ರಮುಖ ಆರೋಪಿಯಾಗಿದ್ದ ಕುನಾಲ್‌ ಸಿಂಗ್‌ ಎಂಬಾತನನ್ನು ಬಿಹಾರ ಪೊಲೀಸರು ಬಂಧಿಸಿದ್ದಾರೆ. ಆತನಿಂದ ಎಕೆ 47 ರೈಫಲ್, 25 ಎಕೆ 47 ಕಾಟ್ರಿಡ್ಜ್‌ಗಳು, 9 ಎಂಎಂ ಕಂಟ್ರಿ ನಿರ್ಮಿತ ಪಿಸ್ತೂಲ್, ಎರಡು 9 ಎಂಎಂ ಮ್ಯಾಗಜೀನ್ ಇತ್ಯಾದಿಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಬಿಹಾರದ ಪೂರ್ವ ಮತ್ತು ಪಶ್ಚಿಮ ಚಂಪಾರಣ್‌ನ ಹಲವು ಪೊಲೀಸ್ ಠಾಣೆಗಳಲ್ಲಿ ಕುನಾಲ್ ಸಿಂಗ್ ವಿರುದ್ಧ ಕೊಲೆ, ಸುಲಿಗೆ ಸೇರಿದಂತೆ 17 ಪ್ರಕರಣಗಳು ದಾಖಲಾಗಿದ್ದು, ತಲೆ ಮರೆಸಿಕೊಂಡು ಓಡಾಡುತ್ತಿದ್ದ ಆರೋಪಿ ಕೊನೆಗೂ ಖಾಕಿ ಬಲೆಗೆ ಬಿದ್ದಿದ್ದಾನೆ. ಮಾರಕಾಸ್ತ್ರಗಳನ್ನು ವಶಪಡಿಸಿಕೊಂಡಿರುವುದಾಗಿ ಪೂರ್ವ ಚಂಪಾರಣ್ ಎಸ್ಪಿ, ಕಾಂತೇಶ್ ಕುಮಾರ್ ಮಿಶ್ರಾ ಸ್ಪಷ್ಟಪಡಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!