ಚುನಾವಣೆ ದಿನಾಂಕ ಘೋಷಣೆ ಬೆನ್ನಲ್ಲೇ ರಾಜ್ಯದಲ್ಲಿ ಪೊಲೀಸರು ಹೈ-ಅಲರ್ಟ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್ :‌

ಕರ್ನಾಟಕ ವಿಧಾನಸಭೆ ಚುನಾವಣೆಯ ದಿನಾಂಕ ಘೋಷಣೆಯ ಬೆನ್ನಲ್ಲೇ ರಾಜ್ಯದಲ್ಲಿ ಪೊಲೀಸರು ಹೈ ಅಲರ್ಟ್‌ ಆಗಿದ್ದಾರೆ. ಹೆದ್ದಾರಿಗಳಲ್ಲಿ ವಾಹನ ತಪಾಸಣೆ ಮಾಡುತ್ತಿದ್ದಾರೆ.

ರಾಷ್ಟ್ರೀಯ ಹೆದ್ದಾರಿ 48 ಹಾಗೂ 75ರಲ್ಲಿ ಪೊಲೀಸರು ಹೈ ಅಲರ್ಟ್‌ ಆಗಿದ್ದಾರೆ. ನೆಲಮಂಗಲ ಬಳಿಯ ಜಾಸ್‌ಟೋಲ್‌, ಲ್ಯಾಂಕೋ ಟೋಲ್‌, ನೈಸ್‌ ರೋಡ್‌ ಟೋಲ್‌ ಸೇರಿದಂತೆ ವಿವಿಧೆಡೆ ಪರಿಶೀಲನೆ ನಡೆಸಲಾಗುತ್ತಿದೆ.

ಚುನಾವಣೆಗಾಗಿ ಅಕ್ರಮ ಮದ್ಯ, ಹಣ, ಗಿಫ್ಟ್‌ ಸಾಗಾಟದ ಬಗ್ಗೆ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!