ದ್ವಾರಕೀಶ್ ಅಂತ್ಯಕ್ರಿಯೆಗೆ ಪೊಲೀಸ್ ಗೌರವ: ಸರಕಾರದಿಂದ ಆದೇಶ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ನಿನ್ನೆಯಷ್ಟೇ ಹೃದಯಾಘಾತದಿಂದ ನಿಧನರಾದ ಕನ್ನಡ ಚಿತ್ರರಂಗದ ಹಿರಿಯ ನಟ ದ್ವಾರಕೀಶ್‌ ಅವರ ಅಂತ್ಯಕ್ರಿಯೆಯನ್ನು ಸಕಲ ಪೊಲೀಸ್‌ ಗೌರವದೊಂದಿಗೆ ನೆರವೇರಿಸುವಂತೆ ಸರ್ಕಾರ ಆದೇಶ ನೀಡಿದೆ.

ಇಂದು ಮಧ್ಯಾಹ್ನ 11.30 ರಿಂದ 12.30ರ ಒಳಗೆ ಅಂತ್ಯಕ್ರಿಯೆ ನಡೆಯಲಿದ್ದು, ಟಿ ಆರ್ ಮಿಲ್ ಹಿಂದೂ ರುದ್ರಭೂಮಿಯಲ್ಲಿ‌ ಅಂತ್ಯಕ್ರಿಯೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಬ್ರಾಹ್ಮಣ ವಿಧಿವಿಧಾನದ ಪ್ರಕಾರ ಅಂತ್ಯಕ್ರಿಯೆ ನಡೆಯಲಿದ್ದು, ಮೊದಲಿಗೆ ಪ್ರೇತ ಸಂಸ್ಕಾರ. ಆನಂತರ ಕಿವಿಯಲ್ಲಿ ನಾರಾಯಣ ಸ್ಮರಣೆ, ಚಿತಾ ಅಗ್ನಿ ಹೋಮದ ನಂತರ ಚಿತಾ ಶುದ್ಧಿ , ಭೂ ಸ್ಪರ್ಶ ದಹನ ಮಾಡಿ, ಆಮೇಲೆ ಅಗ್ನಿ ದಿಗ್ಬಂಧನ ಮಾಡಲಾಗುತ್ತಿದೆ. ಕೊನೆಯಲ್ಲಿ ಹಿರಿ ಮಗನಿಂದ ಅಗ್ನಿ ಸ್ಪರ್ಶ ಮಾಡಲಾಗುತ್ತದೆ ಎಂದು ತಿಳಿದು ಬಂದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!