ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಳಗಾವಿಯಲ್ಲಿ ಕಂಡಕ್ಟರ್ ಮೇಲೆ ಹಲ್ಲೆ ಪ್ರಕರಣ ಸಂಬಂಧ ಇಂದು ಕರ್ನಾಟಕ ಬಂದ್‌ಗೆ ಕರೆ ನೀಡಲಾಗಿದೆ. ಈ ಬಂದ್‌ಗೆ ಹಲವು ಸಂಘಟನೆಗಳು ಸಾಥ್ ನೀಡಿವೆ. ಅಂತೆಯೇ ಹಲವು ಸಂಘಟನೆಗಳು ಬೆಂಬಲ ನೀಡಿಲ್ಲ. ಹೀಗಾಗಿ ಬಲವಂತವಾಗಿ ಬಂದ್ ಮಾಡಿಸುವಂತಿಲ್ಲ ಎಂದು ಪೊಲೀಸರು ಹೇಳಿದ್ದಾರೆ.
ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆವರೆಗೆ ಅಖಂಡ ಕರ್ನಾಟಕ ಬಂದ್‌ಗೆ ಕರೆ ನೀಡಿದ್ದು ಬೆಳಗ್ಗೆ ಬೆಂಗಳೂರಿನ ಟೌನ್‌ಹಾಲ್‌ನಿಂದ ಫ್ರೀಡಂ ಪಾರ್ಕ್ವರೆಗೆ ಬೃಹತ್ ಮೆರವಣಿಗೆ ಹಮ್ಮಿಕೊಂಡಿವೆ. ಬೆಳಗಾವಿ, ಮಂಡ್ಯ, ರಾಮನಗರದಲ್ಲಿ ಸಂಪೂರ್ಣ ಬೆಂಬಲ ಸಿಕ್ಕಿದೆ. ಮೈಸೂರು, ಕಲ್ಯಾಣ ಕರ್ನಾಟಕದಲ್ಲಿ ಮಿಶ್ರ ಬೆಂಬಲ ಇದೆ. ಕರಾವಳಿ ಕರ್ನಾಟಕದಲ್ಲಿ ಬಂದ್‌ಗೆ ಯಾವುದೇ ಸಂಘಟನೆ ಕರೆ ನೀಡಿಲ್ಲ.
ಬಂದ್‌ಗೆ ಬೆಂಗಳೂರಿನಲ್ಲಿ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ. ನಗರದ ಪ್ರಮುಖ ರಸ್ತೆಗಳಲ್ಲಿ ಪೊಲೀಸರು ಬೆಳಗ್ಗೆಯಿಂದಲೇ ಗಸ್ತಿನಲ್ಲಿದ್ದಾರೆ. ಯಾವುದೇ ಮೆರವಣಿಗೆ, ಪ್ರತಿಭಟನೆಗೆ ಅವಕಾಶವಿಲ್ಲ ಎಂದು ಪೊಲೀಸರು ಈಗಾಗಲೇ ಎಚ್ಚರಿಕೆ ನೀಡಿದ್ದಾರೆ.