ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾರಿಗೆ ಹಿಂಬದಿಯಿಂದ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಪೊಲೀಸ್ ಸಿಬ್ಬಂದಿ ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ದೆಹಲಿಯ ಮದಿಪುರ ಮೆಟ್ರೋ ಸ್ಟೇಷನ್ ಸಮೀಪದ ರೋಹ್ಟಕ್ ರಸ್ತೆಯಲ್ಲಿ ನಡೆದಿದೆ.
ಪೊಲೀಸ್ ಇನ್ಸ್ಪೆಕ್ಟರ್ ಜಗ್ಬೀರ್ ಸಿಂಗ್ ಮೃತ ದುರ್ದೈವಿ. ಇವರು ಸೆಕ್ಯೂರಿಟಿ ಘಟಕದಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ತಾಂತ್ರಿಕ ತೊಂದರೆಯ ಕಾರಣದಿಂದ ಅವರ ಕಾರು ರಸ್ತೆಯ ಮಧ್ಯೆ ನಿಂತಿದ್ದು, ಪೊಲೀಸ್ ಇನ್ಸ್ಪೆಕ್ಟರ್ ಕಾರಿನ ಹೊರಗೆ ನಿಂತಿದ್ದರು. ಈ ವೇಳೆ ದುರಂತ ಸಂಭವಿಸಿದೆ.
ಕೂಡಲೇ ಚಾಲಕ ಟ್ರಕ್ ನನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾನೆ. ಈ ಘಟನೆಯ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಕೈಗೆತ್ತುಕೊಂಡಿದ್ದಾರೆ.