ಸಿಲಿಕಾನ್ ಸಿಟಿಯ ಪಿಜಿಗಳಿಗೆ ಹೊಸ ಗೈಡ್‌ ಲೈನ್ಸ್ ಹೊರಡಿಸಿದ ಪೊಲೀಸರು!

ಹೊಸದಿಗಂತ ವರದಿ,ಬೆಂಗಳೂರು:

ಅಪರಾಧ ಕೃತ್ಯಗಳ ತಡೆಗಟ್ಟುವ ನಿಟ್ಟಿನಲ್ಲಿ ನಗರದ ಎಲ್ಲಾ ಪಿಜಿಗಳಿಗೆ ನಗರ ಪೊಲೀಸರು ಹೊಸ ಗೈಡ್‌ ಲೈನ್ಸ್ ಹೊರಡಿಸಿದ್ದಾರೆ.

ಕರ್ನಾಟಕ ಪೊಲೀಸ್ ಕಾಯ್ದೆಯಡಿಯಲ್ಲಿ ಕೆಲ ಸೂಚನೆಗಳನ್ನು ಪೊಲೀಸರು ಸಾರ್ವಜನಿಕರ ಹಿತದೃಷ್ಟಿಯಿಂದ ಮತ್ತು ನಗರದಲ್ಲಿ ಆಗುವ ಅಪರಾಧ ಕೃತ್ಯಗಳನ್ನು ನಿಯಂತ್ರಿಸಲು ಈ ಮಾರ್ಗಸೂಚಿಯನ್ನು ನಗರ ಪೊಲೀಸ್ ಆಯುಕ್ತ ಬಿ. ದಯಾನಂದ ಅವರು ತಿಳಿಸಿದ್ದಾರೆ.

ಪಿಜಿ ಸೆಂಟರ್‌ಗಳಲ್ಲಿ ರಕ್ಷಣೆ ಕೈಗೊಳ್ಳಲು ಕೆಲವು ಮಾರ್ಗಸೂಚಿ ಮಾಡಲಾಗಿದೆ. ಪಿಜಿಗಳಲ್ಲಿ ಕೆಲಸ ಮಾಡುವ ಸಿಬ್ಬಂದಿ, ಪಿಜಿ ಗೆಸ್ಟ್‌ಗಳ ಪೂರ್ವಪರ ಸಂಗ್ರಹಕ್ಕೆ ಸೂಚನೆ ನೀಡಲಾಗಿದೆ. ಪಿಜಿಗಳಲ್ಲಿ ಹೊರ ರಾಜ್ಯಗಳಲ್ಲದೆ, ಹೊರ ದೇಶದ ಹಲವರು ವಾಸವಿದ್ದಾರೆ. ಟೆಕ್ಕಿಗಳು, ವಿದ್ಯಾರ್ಥಿಗಳು ಸಾಕಷ್ಟು ಮಂದಿ ವಾಸವಿದ್ದಾರೆ. ಸುರಕ್ಷತೆ ಸಲುವಾಗಿ ಅವರ ವಿವರಗಳನ್ನು ಸಂಗ್ರಹಿಸಲು ಸೂಚನೆ ನೀಡಲಾಗಿದೆ ಎಂದರು.

ಮಾರ್ಗಸೂಚಿಯಲ್ಲಿ ಏನಿದೆ?

* ಅಗತ್ಯವಿರುವ ಪರವಾನಿಗೆಯನ್ನು ಬಿಬಿಎಂಪಿಯಿಂದ ಕಡ್ಡಾಯವಾಗಿ (ಟ್ರೇಡ್ ಲೈಸನ್ಸ್) ಪಡೆಯುವುದು.

* ವಾಸಕ್ಕೆ ಬರುವ ಎಲ್ಲಾ ವ್ಯಕ್ತಿಗಳ ಗುರುತಿನ ಚೀಟಿ ಮತ್ತು ಇತ್ತೀಚಿನ ಭಾವಚಿತ್ರ ಪಡೆದು, ರಕ್ತ ಸಂಬಂಧಿಕರ ವಿವರಗಳನ್ನು ಮೊಬೈಲ್ ಸಂಖ್ಯೆಗಳೊಂದಿಗೆ ತಂತ್ರಜ್ಞಾನದ ಮೂಲಕ (ಗಣಕೀಕರಣ) ದಾಖಲಿಸುವುದು ಹಾಗು ಭೇಟಿ ನೀಡಲು ಬರುವವರ ವಿವರಗಳನ್ನು ಪ್ರತ್ಯೇಕವಾಗಿ ನಿರ್ವಹಿಸುವುದು.

* ಕರ್ನಾಟಕ ಸಾರ್ವಜನಿಕ ಸುರಕ್ಷತೆ ಅಧಿನಿಯಮ- 2017 ರ ಅನ್ವಯ ಕಡ್ಡಾಯವಾಗಿ ಸಿಸಿ ಕ್ಯಾಮರಾಗಳನ್ನು ಅಳವಡಿಸುವುದು ಹಾಗೂ ಅಗ್ನಿ ಅನಾಹುತದ ಕುರಿತಂತೆ ಅಗತ್ಯ ಸುರಕ್ಷತೆ ಕ್ರಮಗಳನ್ನು ಅನುಸರಿಸುವುದು.

* ಮಾದಕ ವಸ್ತುಗಳ ಸೇವನೆ ಮತ್ತು ಸಂಗ್ರಹಣೆಯಂತಹ ಕಾನೂನು ಬಾಹಿರ ಚಟುವಟಿಕೆಗಳಿಗೆ ಅವಕಾಶ ಮಾಡಿಕೊಡಬಾರದು.

* ಸ್ಥಳೀಯ ಪೊಲೀಸ್ ಠಾಣೆ, ತುರ್ತು ಸ್ಪಂದನೆಯ- 112, ವೈದ್ಯಕೀಯ ಸೇವೆಯ-103, ಮತ್ತು ಸೈಬರ್ ಅಪರಾಧಕ್ಕೆ ಸಂಬಂಧಪಟ್ಟ-1930 ಮುಂತಾದ ಅಗತ್ಯ ಸೇವೆಗಳ ದೂರವಾಣಿ ಸಂಖ್ಯೆಗಳನ್ನು ಎಲ್ಲರಿಗೂ ಗೋಚರವಾಗುವಂತೆ ಪ್ರದರ್ಶಿಸುವುದು ಹಾಗೂ ಪ್ರಥಮ ಚಿಕೆತ್ಸೆ ಸಲಕರಣೆಗಳನ್ನು ಇಟ್ಟುಕೊಳ್ಳುವುದು.

* ಕರ್ತವ್ಯಕ್ಕೆ ನೇಮಿಸಿಕೊಳ್ಳುವ ಅಡುಗೆ ಕೆಲಸ ಸೆಕ್ಯೂರಿಟಿ ಗಾರ್ಡ್ ಹಾಗೂ ಇನ್ನಿತರೇ ವ್ಯಕ್ತಿಗಳ ಪೂರ್ವಾಪರಗಳನ್ನು ಪೊಲೀಸ್ ಪರಿಶೀಲನೆಗೆ ಒಳಪಡಿಸಿದ ನಂತರ ಕರ್ತವ್ಯಕ್ಕೆ ನೇಮಿಸಿಕೊಳ್ಳುವುದು. ಹಾಗೂ ಇತರೆ ವಿಳಾಸದ ದೃಢೀಕರಣ ಸೇರಿದಂತೆ ಸಂಬಂಧಿಕರ ಮಾಹಿತಿಯನ್ನು ಸೂಕ್ತ ದಾಖಲಾತಿಗಳೊಂದಿಗೆ ಪಡೆದು ನಿರ್ವಹಿಸುವುದು.

* ವಿದೇಶಿ ಪ್ರಜೆಗಳು ಷಿ.ಜಿ.ಯಲ್ಲಿ ನೆಲೆಸಿದ್ದಲ್ಲಿ, ಮಾಹಿತಿಯನ್ನು ದಿ ರಿಜೆಸ್ಟ್ರೇಷನ್ ಆಫ್ ಫಾರಿನರ್ಸ್ ರೂಲ್ಸ್, ಫಾರಂ ಸಿ ಅನ್ವಯ ಸ್ಥಳೀಯ ಪೊಲೀಸ್ ಠಾಣೆಗೆ ನೇರವಾಗಿ ಅಥವಾ ತಂತ್ರಜ್ಞಾನದ ಮೂಲಕ ನೀಡುವುದು.

* ವಾಸಕ್ಕೆ ಪ್ರವೇಶ ಪಡೆದಿರುವವರನ್ನು ಹೊರತು ಪಡಿಸಿ ಇತರೇ ಯಾರಿಗೂ ವಾಸ್ತವ್ಯಕ್ಕೆ ಅವಕಾಶ ಮಾಡಿಕೊಡಬಾರದು.

* ಸರ್ವೋಚ್ಚ ನ್ಯಾಯಾಲಯದ ಆದೇಶದ ಅನುಸಾರ ರಾತ್ರಿ 10 ಗಂಟೆಯಿಂದ ಬೆಳಗ್ಗೆ 6 ಗಂಟೆಯವರೆಗೆ ಯಾವುದೇ ಧ್ವನಿವರ್ಧಕಗಳನ್ನು ಉಪಯೋಗಿಸಬಾರದು.

* ಒಂದು ವೇಳೆ ಸುರಕ್ಷತಾ ಕ್ರಮ, ಮುಂಜಾಗ್ರತ ಕ್ರಮಗಳನ್ನು ಕೈಗೊಳ್ಳದೇ ಯಾವುದಾದರೂ ಅಹಿತಕರ ಘಟನೆ ಸಂಭವಿಸಿದಲ್ಲಿ ಸಂಬಂಧಪಟ್ಟಷಿ ಜಿ ಮಾಲೀಕರು ಅಥವಾ ಅದರ ವ್ಯವಸ್ಥಾಪಕರೇ ನೇರ ಹೊಣೆಗಾರರಾಗುತ್ತಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!