ಭಯೋತ್ಪಾದಕ ಸಹಚರರ ಮೇಲೆ ಹದ್ದಿನ ಕಣ್ಣಿಟ್ಟ ಪೊಲೀಸರು, ತೀವ್ರ ಶೋಧ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಪಹಲ್ಗಾಮ್​ನಲ್ಲಿ​ ಉಗ್ರರು ಪ್ರವಾಸಿಗರ ಹತ್ಯಾಕಾಂಡ ನಡೆಸಿದ ಬಳಿಕ ಕಠಿಣ ಕ್ರಮಕ್ಕೆ ಮುಂದಾಗಿರುವ ಕೇಂದ್ರ ಸರ್ಕಾರ, ಉಗ್ರ ಸಂಘಟನೆಯಲ್ಲಿ ಭಾಗಿಯಾದವರ ಮನೆಗಳನ್ನು ಧ್ವಂಸಗೊಳಿಸುವ ಜೊತೆಗೆ ಭಯೋತ್ಪಾದಕ ಸಂಘಟನೆಗಳ ನಂಟು ಹೊಂದಿರುವವರ ಪತ್ತೆ ಕಾರ್ಯಾಚರಣೆಯನ್ನು ತೀವ್ರಗೊಳಿಸಿದೆ.

ಕಾಶ್ಮೀರದಲ್ಲಿ ನಿಷೇಧಿತ ಭಯೋತ್ಪಾದಕ ಸಂಘಟನೆಗಳ ಸಹಚರರ ವಿರುದ್ಧದ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಕಾರ್ಯಾಚರಣೆ ಚುರುಕುಗೊಳಿಸಿದ್ದಾರೆ. ವಿವಿಧ ಸ್ಥಳಗಳಲ್ಲಿ ಶೋಧ ತೀವ್ರಗೊಳಿಸಲಾಗಿದೆ.

ಕಾರ್ಯಾಚರಣೆ ಭಾಗವಾಗಿ ಸೋಮವಾರ ಪೊಲೀಸರು ನಗರದೆಲ್ಲೆಡೆ ಭಯೋತ್ಪಾದಕ ಸಹಚರರ 13 ಮನೆಗಳಲ್ಲಿ ಶೋಧ ಕೈಗೊಂಡಿದ್ದಾರೆ. ಈ ಕುರಿತು ಹೇಳಿಕೆ ಹೊರಡಿಸಿರುವ ಪೊಲೀಸರು, ಕಾನೂನುಬಾಹಿರ ಚಟುವಟಿಕೆಗಳ ತಡೆಗಟ್ಟುವಿಕೆ ಕಾಯ್ದೆ (ಯುಎಪಿಎ) ಅಡಿಯಲ್ಲಿ ದಾಖಲಾಗಿರುವ ಪ್ರಕರಣಗಳ ತನಿಖೆಯ ಭಾಗವಾಗಿ ಈ ಶೋಧ ನಡೆಸಲಾಗಿದೆ. ಭಯೋತ್ಪಾದನೆಗೆ ಬೆಂಬಲ ನೀಡುವ ಮೂಲ ಸೌಕರ್ಯಗಳನ್ನು ನಾಶ ಮಾಡುವುದು ಇದರ ಉದ್ದೇಶವಾಗಿದೆ ಎಂದಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!