ಸೋಷಿಯಲ್ ಮೀಡಿಯಾದ ಮೇಲೆ ಪೊಲೀಸರ ಹದ್ದಿನ ಕಣ್ಣು: ಸಚಿವ ಡಾ.ಜಿ ಪರಮೇಶ್ವರ್

 ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯದಲ್ಲಿ ಸೋಷಿಯಲ್ ಮೀಡಿಯಾ ಮೇಲೆ ಪೊಲೀಸರು ಹದ್ದಿನ ಕಣ್ಣು ನೆಟ್ಟಿದ್ದಾರೆ ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್ ತಿಳಿಸಿದ್ದಾರೆ.

ವಿಧಾನ ಪರಿಷತ್ತಿನಲ್ಲಿ ಪ್ರಶ್ನೋತ್ತರ ಕಲಾಪದ ವೇಳೆಯಲ್ಲಿ ಸೋಷಿಯಲ್ ಮೀಡಿಯಾ ಬಹಳ ಉಪಯೋಗ ಆಗುತ್ತಿದೆ. ಅದರ ಜೊತೆಗೆ ಅಷ್ಟೇ ದುರುಪಯೋಗ ಆಗುತ್ತಿದೆ. ನಾವು ಈಗ ಟೆನ್ನಾಲಜಿ ಇಲ್ಲದೇ ಬದುಕಲು ಸಾಧ್ಯವಿಲ್ಲ ಎನ್ನುವ ಸ್ಥಿತಿಗೆ ತಲುಪಿದ್ದೇವೆ. ಫೇಸ್ ಬುಕ್, ಎಕ್ಸ್, ಯೂಟ್ಯೂಬ್ ಗಳ ಮೂಲಕ ಸುಳ್ಳು ಸುದ್ದಿ ಹಬ್ಬಿಸೋ ಕೆಲಸ ಆಗುತ್ತಿದೆ ಎಂದರು.

ದೇಶದಲ್ಲಿ ಮೊದಲ ಬಾರಿಗೆ ಸೋಷಿಯಲ್ ಮೀಡಿಯಾ ಮಾನಿಟರಿಂಗ್ ಗೆ ಒಂದು ವಿಭಾಗ ಪ್ರಾರಂಭ ಮಾಡಿದ್ದೇವೆ. ಎಡಿಜಿಪಿ ಸೈಬರ್ ಕ್ರೈಂ ವಿಭಾಗ ನೇಮಕ ಮಾಡಲಾಗಿದೆ. ಪ್ರತಿ ಠಾಣೆಯಲ್ಲಿ ಸೋಷಿಯಲ್ ಮೀಡಿಯಾ ಮಾನಿಟರಿಂಗ್ ಸೆಲ್ ಸ್ಥಾಪನೆ ಮಾಡಿದ್ದೇವೆ. 247 ಪೊಲೀಸರು ಮಾನಿಟರ್ ಮಾಡುತ್ತಿದ್ದಾರೆ. ಸುಳ್ಳು ಸುದ್ದಿ ಹಬ್ಬಿಸೋದು ಕಂಡು ಬಂದರೇ ಕೂಡಲೇ ಸುಮೋಟೋ ಕೇಸ್ ಹಾಕಲಾಗುತ್ತದೆ ಎಂದರು.

ನಾವು ಫ್ಯಾಕ್ಟ್ ಚೆಕ್ ಮಾಡುವ ಆಪ್ ಮಾಡಿದ್ದೇವೆ. ನಿತ್ಯ ಪೊಲೀಸರು ಮಾನಿಟರಿಂಗ್ ಮಾಡುವ ಕೆಲಸ ಮಾಡುತ್ತಿದ್ದಾರೆ. ಸುಳ್ಳು ಸುದ್ದಿ ಬಂದರೇ ಕ್ರಮ ಕೈಗೊಳ್ಳುತ್ತೇವೆ. ಪೊಲೀಸ್ ಠಾಣೆಯಲ್ಲಿ ಇದಕ್ಕಾಗಿ ಡೆಸ್ಕ್ ಕೂಡ ಮಾಡಲಾಗಿದೆ. ರಾಜ್ಯದ ಪ್ರತಿ ಠಾಣೆಯಲ್ಲಿ ಮೀಡಿಯಾಗಾಗಿ ಒಂದು ಡೆಸ್ಕ್, ಲಾ ಆ್ಯಂಡ್ ಆರ್ಡರ್‌ಗೆ ಒಂದು ಡೆಸ್ಕ್, ವೈಯಕ್ತಿಕ ಡೆಸ್ಕ್, ಸಂಘಟನೆ ಡೆಸ್ಕ್ ಮಾಡಿದ್ದೇವೆ ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!