ಹೊಸದಿಗಂತ ಡಿಜಿಟಲ್ ಡೆಸ್ಕ್:
ನ್ಯೂ ಇಯರ್ ಸೆಲಬ್ರೇಷನ್ ನೆಪದಲ್ಲಿ ಡ್ರಿಂಕ್ ಆ್ಯಂಡ್ ಡ್ರೈವ್, ರ್‍ಯಾಷ್ ಡ್ರೈವ್ ಮಾಡುವವರಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಒಂದು ವಾರದಿಂದ ಮುಂಚಿತವಾಗಿಯೇ ಬೆಂಗಳೂರು ಸಂಚಾರಿ ಪೊಲೀಸರು ಕಾರ್ಯಾಚರಣೆ ಚುರುಕುಗೊಳಿಸಿದ್ದಾರೆ.
ನಗರದ 50 ಸಂಚಾರಿ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಕಳೆದ ಒಂದು ವಾರದಲ್ಲಿ 95,179 ವಾಹನ ಚಾಲಕರನ್ನು ತಪಾಸಣೆಗೊಳಪಡಿಸಲಾಗಿದ್ದು, ಆ ಪೈಕಿ ಪಾನಮತ್ತರಾಗಿದ್ದ 1,187 ಚಾಲಕರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಹಾಗೂ 165 ವಾಹನ ಚಾಲಕರ ವಿರುದ್ಧ ಅತಿ ವೇಗದ ಚಾಲನೆಯ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಅವರಿಂದ 1.65 ಲಕ್ಷ ರೂ. ದಂಡ ಸಂಗ್ರಹಿಸಲಾಗಿದೆ.
ವರ್ಷಾಚರಣೆಯಲ್ಲಿ ಮದ್ಯಪಾನ/ಮಾದಕ ದ್ರವ್ಯ ಸೇವನೆ ಮಾಡಿ ವಾಹನ ಚಾಲನೆ ಮಾಡುವವರ ಪತ್ತೆಗೆ ರಾತ್ರಿಯಿಡೀ ನಗರದ ವಿವಿಧ ಸ್ಥಳಗಳಲ್ಲಿ ಪರಿಶೀಲನೆಗೆ ಚೆಕ್ ಪಾಯಿಂಟ್‌ಗಳನ್ನು ನಿರ್ಮಿಸಲಾಗಿದೆ. ಅತಿ ವೇಗ ಮತ್ತು ಅಜಾಗರೂಕತೆಯಿಂದ ವಾಹನ ಚಾಲನೆ ಮಾಡುವ ಹಾಗೂ ವ್ಹೀಲಿಂಗ್/ಡ್ರ್ಯಾಗ್ ರೇಸ್‌ನಲ್ಲಿ ಭಾಗಿಯಾಗುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು.