ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………
ಹೊಸ ದಿಗಂತ ವರದಿ, ಧಾರವಾಡ:
ರಾಜ್ಯದಲ್ಲಿ ಪೊಲೀಸ್ ಇಲಾಖೆಯಲ್ಲಿ 16 ಸಾವಿರ ಹುದ್ದೆಗಳು ಖಾಲಿ ಇದ್ದು, ಶೀಘ್ರದಲ್ಲಿಯೇ ನಾಲ್ಕು ಸಾವಿರ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳುತ್ತಿದೆ ಎಂದು ಗೃಹಮಂತ್ರಿ ಅರಗ ಜ್ಞಾನೇಂದ್ರ ತಿಳಸಿದರು.
ಬುಧವಾರ ಮಾಧ್ಯಮದವರೊಂದಿಗೆ ಮಾತನಾಡಿ, ನಾಲ್ಕು ವರ್ಷದ ಹಿಂದೆ 33 ಸಾವಿರ ಹುದ್ದೆ ಖಾಲಿ ಇದ್ದವು. ಹಂತಹoತವಾಗಿ ಭರ್ತಿ ಮಾಡಿಕೊಂಡ ಹಿನ್ನಲೆ 16 ಸಾವಿರ ಹುದ್ದೆ ಉಳಿದಿವೆ ಎಂದರು.
ಇಲಾಖೆಯಲ್ಲಿ ಸಿಬ್ಬಂದಿ ಕೊರತೆ ಇರುವ ಕಾರಣಕ್ಕೆ ಶೀಘ್ರವೇ 4 ಸಾವಿರ ಹುದ್ದೆಗಳ ಭರ್ತಿಗೆ ಆರ್ಥಿಕ ಇಲಾಖೆಯಿಂದ ಅನುಮೋದನೆ ಪಡೆದು, ನೇಮಕಾತಿ ಆದೇಶ ಹೊರಡಿಸಲಿದೆ ಎಂದು ತಿಳಿಸಿದರು.
ಪೊಲೀಸ್ ಮತ್ತು ಅಗ್ನಿಶಾಮಕ ಇಲಾಖೆಗೆ ವಿಶೇಷ ಆದ್ಯತೆ ನೀಡಲಿದೆ. ಈ ಎರಡು ಇಲಾಖೆಗೆ ಹೆಚ್ಚಿನ ಅನುದಾನ ನೀಡುತ್ತಿದೆ. ಪೊಲೀಸರಿಗೆ ಉತ್ತಮ ವಸತಿ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಹೇಳಿದರು.
ಮೊದಲು ಸಿಂಗಲ್ ರೂಮ್ ಮನೆಗಳಿದ್ದವು. ಈಗ ಡಬಲ್ ರೂಮ್ ಮನೆ ನೀಡಲಾಗಿದೆ. ಶೇ.49ರಷ್ಟು ಪೊಲೀಸ್ ಸಿಬ್ಬಂದಿಗೆ ಮನೆ ನೀಡಿದ್ದು, ಉಳಿದವರಿಗೆ ಹಂತಹoತವಾಗಿ ನೀಡಲಿದೆ ಎಂದರು.
ಇನ್ನೂ ಅಗ್ನಿಶಾಮಕ ಹಾಗೂ ಪೊಲೀಸ್ ಠಾಣೆಗಳ ಮೇಲ್ದರ್ಜೆಗೆ ಏರಿಸುವ ಚಿಂತನೆ ಇದೆ. ಶೀರ್ಘದಲ್ಲಿಯೇ ಈ ಕಾರ್ಯವೂ ನಡೆಯಲಿದೆ ಎಂದು ಹೇಳಿದರು.