September 16, 2026
Wednesday, September 16, 2026
spot_img

ಬಿಜೆಪಿ ಶಾಸಕ ಚೆನ್ನಬಸಪ್ಪರನ್ನು ಹೆಗಲ ಮೇಲೆ ಕೂರಿಸಿಕೊಂಡು ಕುಣಿದ ಪೊಲೀಸ್‌ ಸಿಬ್ಬಂದಿ: ಸೈಲೆಂಟಾಗಿ ಟ್ರಾನ್ಸ್‌ಫರ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಶಿವಮೊಗ್ಗದಲ್ಲಿ ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಇಬ್ಬರು ಪೊಲೀಸ್‌ ಸಿಬ್ಬಂದಿ ಬಿಜೆಪಿ ಶಾಸಕ ಶಾಸಕ ಚೆನ್ನಬಸಪ್ಪರನ್ನು ಹೆಗಲ ಮೇಲೆ ಕೂರಿಸಿಕೊಂಡು ಡ್ಯಾನ್ಸ್‌ ಮಾಡಿದ್ದಾರೆ. ಈ ವೇಳೆ ಸಿಬ್ಬಂದಿ ಪೊಲೀಸ್‌ ಸಮವಸ್ತ್ರ ಧರಿಸಿದ್ದರು. ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್‌ ಆಗಿದ್ದು, ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

ಪೊಲೀಸ್ ಠಾಣೆಯಲ್ಲಿ ಪ್ರತಿಷ್ಠಾಪಿಸಿದ್ದ ಗಣಪತಿ ವಿಸರ್ಜನಾ ಮೆರವಣಿಗೆ ವೇಳ ಬಿಜೆಪಿ ಶಾಸಕ ಚೆನ್ನಬಸಪ್ಪರನ್ನು ಹೊತ್ತು ಕುಣಿದ ಇಬ್ಬರು ಸಂಚಾರಿ ಪೊಲೀಸರನ್ನು ಬೇರೆಡೆಗೆ ಎತ್ತಂಗಡಿ ಮಾಡಲಾಗಿದೆ. ಶಿವಮೊಗ್ಗ ಜಿಲ್ಲಾ‌ ಪೊಲೀಸ್ ವರಿಷ್ಠಾಧಿಕಾರಿ ಈ‌ ಆದೇಶ ಹೊರಡಿಸಿದ್ದಾರೆ.

ನಗರದ ಕೋಟೆ ಶ್ರೀ ಭೀಮೇಶ್ವರ ದೇವಾಲಯದ ಬಳಿ ಸಾಗುತ್ತಿದ್ದ ಗಣಪತಿ ವಿಸರ್ಜನಾ ಮೆರವಣಿಗೆಯಲ್ಲಿ ಶಾಸಕ ಚನ್ನಬಸಪ್ಪ ಅವರು ಭಾಗಿಯಾಗಿದ್ದರು. ಈ ವೇಳೆ ಶಾಸಕರನ್ನ ಹೊತ್ತು ಕುಣಿದ ಶಿವಮೊಗ್ಗದ ಪೂರ್ವ ಸಂಚಾರಿ ಪೊಲೀಸ್ ಠಾಣೆಯ ಗಣೇಶ್ ಹಾಗೂ ಪ್ರಕಾಶ್.ಎ.ಕೆ ಅವರನ್ನು ಬೇರೆಡೆಗೆ ವರ್ಗಾವಣೆ ಮಾಡಲಾಗಿದೆ. ಗಣೇಶ್‌ ತೀರ್ಥಹಳ್ಳಿಯ ಆಗುಂಬೆಗೆ ವರ್ಗ ಆಗಿದ್ದರೆ, ಪ್ರಕಾಶ್‌ ಸೊರಬದ ಆನವಟ್ಟಿಗೆ ವರ್ಗ ಮಾಡಲಾಗಿದೆ.

ಪೂರ್ವ ಸಂಚಾರಿ ಪೊಲೀಸ್ ಠಾಣೆಯಿಂದ ತುಂಗಾ ನದಿಯ ಭೀಮನಮಡು ಕಡೆಗೆ ಸಾಗುತ್ತಿದ್ದ ಮೆರವಣಿಗೆಯಲ್ಲಿ ಶಾಸಕ ಚನ್ನಬಸಪ್ಪರನ್ನ ಟ್ರಾಫಿಕ್ ಠಾಣೆ ಪೊಲೀಸ್ ಸಿಬ್ಬಂದಿ ಹೊತ್ತು ಕುಣಿದಿದ್ದರು. ಯೂನಿಫಾರ್ಮ್ ನಲ್ಲಿದ್ದ ಪೊಲೀಸ್ ಸಿಬ್ಬಂದಿ, ಶಾಸಕರ ಹೊತ್ತು ಕುಣಿದ ವಿಡಿಯೋ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್ ಆಗುವ ಜೊತೆಗೆ ಶಿವಮೊಗ್ಗದಲ್ಲಿ ಸಾಕಷ್ಟು ಚರ್ಚೆಗೂ ಗ್ರಾಸವಾಗಿತ್ತು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !