ಹೊಸದಿಗಂತ ಡಿಜಿಟಲ್ ಡೆಸ್ಕ್:
ಪೊಲೀಸ್ ಸಿಬ್ಬಂದಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಳ್ಳಾರಿಯಲ್ಲಿ ನಡೆದಿದೆ.
ಪ್ರಕಾಶ್ ನಾಯ್ಕ್(25) ಆತ್ಮಹತ್ಯೆ ಮಾಡಿಕೊಂಡ ಡಿಎಆರ್ ಕಾನ್ಸ್ಟೇಬಲ್.
ಡಿಎಆರ್ ಪೊಲೀಸ್ ಹೆಡ್ ಕ್ವಾಟರ್ಸ್‌ನಲ್ಲಿ ನೇಣಿಗೆ ಶರಣಾಗಿದ್ದು, ಸಿಸಿಟಿ (ಭಯೋತ್ಪಾದನೆ ನಿಗ್ರಹ ತರಬೇತಿ) ಹೆದರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆಂಬ ಶಂಕೆ ವ್ಯಕ್ತವಾಗಿದೆ.
ಪ್ರಕಾಶ್ ಕಳೆದೊಂದು ವರ್ಷದ ಹಿಂದೆಯಷ್ಟೇ ಇಲಾಖೆಗೆ ಸೇರಿದ್ದರು. ಅವರು ಅವಿವಾಹಿತರಾಗಿದ್ದು, ಇದೀಗ ಸಾವನ್ನಪ್ಪಿದ್ದಾರೆ. ಗಾಂಧಿನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.