ಹೊಸದಿಗಂತ ಡಿಜಿಟಲ್ ಡೆಸ್ಕ್:
ಹೃದಯಾಘಾತದಿಂದ ಪೊಲೀಸ್ ಸಿಬ್ಬಂದಿಯೊಬ್ಬರು ಮೃತಪಟ್ಟಿರುವ ಘಟನೆ ಯಾದಗಿರಿಯಲ್ಲಿ ನಡೆದಿದೆ.
ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಗೋಗಿ ಠಾಣೆಯ ಪೊಲೀಸ್ ಸಿಬ್ಬಂದಿ ದೇವಿಂದ್ರಪ್ಪ (40) ಮೃತ ದುರ್ದೈವಿ.
ಅನಾರೋಗ್ಯದಿಂದ ಬಳಲುತ್ತಿದ್ದಅವರು ಜೂನ್ ತಿಂಗಳಿನಿಂದ ರಜೆಯಲ್ಲಿದ್ದರು. ಹೆಚ್ಚಿನ ಚಿಕಿತ್ಸೆಗಾಗಿ ಬೆಂಗರೂರಿನ ಆಸ್ಪತ್ರೆಗೆ ತೆರಳುವ ವೇಳೆ ಮಾರ್ಗಮಧ್ಯೆಯೇ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ಅವರ ಸಾವಿಗೆ ಯಾದಗಿರಿ ಪೊಲೀಸರು ಸಂತಾಪ ಸೂಚಿಸಿದ್ದಾರೆ.