ಪೊಲೀಸರ ಪಿಸ್ತೂಲ್‌ ಶೋಪೀಸ್ ಅಲ್ಲ: ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ

ಹೊಸದಿಗಂತ ಡಿಜಿಟಲ್ ಡೆಸ್ಕ್: 

ಮುಂಬೈ ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣ ಸಂಬಂಧ ಆರೋಪಿ ಅಕ್ಷಯ್‌ ಶಿಂದೆ ಮೇಲೆ ಪೊಲೀಸರು ಗುಂಡು ಹಾರಿಸಿದ್ದ ಕುರಿತು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂಧೆ ಪ್ರತಿಕ್ರಿಯೆ ನೀಡಿದ್ದು, ಪೊಲೀಸರು ಆತ್ಮರಕ್ಷಣೆಗಾಗಿ ಆತನತ್ತ ಗುಂಡು ಹಾರಿಸಿದ್ದಾರೆ ಎಂದು ಹೇಳಿದ್ದಾರೆ.

ಸುದ್ದಿವಾಹಿನಿಯೊಂದು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಅವರು, ‘ಆರೋಪಿಯು, ಪೊಲೀಸರತ್ತ ಗುಂಡು ಹಾರಿಸಿ, ಓಡಿ ಹೋಗಿದ್ದರೆ ಏನಾಗುತ್ತಿತ್ತು’ ಎಂದು ಪ್ರಶ್ನಿಸಿದ್ದಾರೆ.

ಈ ಘಟನೆಯನ್ನು ನಕಲಿ ಎನ್‌ಕೌಂಟರ್‌ ಎಂಬ ವಿಪಕ್ಷಗಳ ಒಕ್ಕೂಟ ಮಹಾ ವಿಕಾಸ್‌ ಅಘಾಡಿ (ಎಂವಿಎ) ಹೇಳಿಕೆಯನ್ನು ಮುಖ್ಯಮಂತ್ರಿ ಶಿಂಧೆ ಖಂಡಿಸಿದ್ದಾರೆ.

ಪೊಲೀಸರು ಆತ್ಮರಕ್ಷಣೆಗಾಗಿ ಪಿಸ್ತೂಲ್‌ ಇಟ್ಟುಕೊಂಡಿರುತ್ತಾರೆ. ಅದು ತೋರಿಕೆ ವಸ್ತುವಲ್ಲ. ಒಂದು ವೇಳೆ ಆರೋಪಿ ತಪ್ಪಿಸಿಕೊಂಡು ಹೋಗಿದ್ದರೆ ವಿರೋಧ ಪಕ್ಷಗಳು ಸರ್ಕಾರವನ್ನು ಟೀಕಿಸುತ್ತಿದ್ದವು. ತಪ್ಪಿಸಿಕೊಳ್ಳುವುದಕ್ಕೆ ನಾವೇ ಆತನಿಗೆ ನೆರವಾದೆವು ಎನ್ನುತ್ತಿದ್ದವು ಎಂದರು.

ಲೈಂಗಿಕ ದೌರ್ಜನ್ಯ ನಡೆದಿದೆ ಎನ್ನಲಾದ ಬದ್ಲಾಪುರದ ಶಾಲೆಯ ಆಡಳಿತ ಮಂಡಳಿ ಸದಸ್ಯರು ತಲೆಮರೆಸಿಕೊಂಡಿರುವ ಕುರಿತ ಪತ್ರಕರ್ತರ ಪ್ರಶ್ನೆಗೆ, ‘ಎಲ್ಲಿಯೇ ತಲೆ ಮರೆಸಿಕೊಂಡಿದ್ದರೂ ಅವರನ್ನೆಲ್ಲಾ ಒಂದು ದಿನ ಬಂಧಿಸಲಾಗುತ್ತದೆ. ಎಷ್ಟು ದಿನ ತಲೆ ಮರೆಸಿಕೊಳ್ಳುತ್ತಾರೆ’ ಎಂದರು.

ಅಕ್ಷಯ್‌ ಶಿಂದೆ ಒಬ್ಬ ರಾಕ್ಷಸನಿದ್ದಂತೆ. ಆತನಿಗೆ ನಾಲ್ವರು ಪತ್ನಿಯರಿದ್ದರು. ಒಬ್ಬ ಪತ್ನಿ ಆತನ ವಿರುದ್ಧ ಎಫ್‌ಐಆರ್‌ ದಾಖಲಿಸಿದ್ದಾರೆ. ಆತ ರಾಕ್ಷಸ ಎಂದೂ ಹೇಳಿಕೆ ನೀಡಿದ್ದಾರೆ. ಅವರೊಂದಿಗೆ ಆತ ಎಷ್ಟು ಕ್ರೂರವಾಗಿ ನಡೆದುಕೊಂಡಿರಬೇಕು ಊಹಿಸಿ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

- Advertisement - Skool Shine
Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!