Friday, July 1, 2022

Latest Posts

ಕಲಬುರಗಿ ನಗರದಾದ್ಯಂತ ಜೂನ್ 14ರವರೆಗೆ ನಿಷೇಧಾಜ್ಞೆ ಜಾರಿಗೊಳಿಸಿ ಪೊಲೀಸ್ ಆಯುಕ್ತ ಆದೇಶ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸದಿಗಂತ ವರದಿ, ಕಲಬುರಗಿ:

ಕೋವಿಡ್ ಎರಡನೇ ಅಲೆ ನಿಯಂತ್ರಣಕ್ಕಾಗಿ ಕಲಬುರಗಿ ನಗರದಾದ್ಯಂತ 2021ರ ಜೂನ್ 7ರ ಬೆಳಗ್ಗೆ 6 ಗಂಟೆಯಿಂದ 2021ರ ಜೂನ್ 14ರ ಬೆಳಿಗ್ಗೆ 6 ಗಂಟೆಯವರೆಗೆ ರಾಜ್ಯ ಸರ್ಕಾರವು ದಿನಾಂಕ: 07-05-2021, 21-05-2021 ಹಾಗೂ 03-06-2021 ರಂದು ಹೊರಡಿಸಿದ ಆದೇಶಗಳಲ್ಲಿನ ಪರಿಷ್ಕ್ರತ ಮಾರ್ಗಸೂಚಿಗಳಲ್ಲಿನ ಎಲ್ಲಾ ಷರತ್ತಿಗೊಳಪಟ್ಟು ಸಿ.ಆರ್.ಪಿ.ಸಿ. ಕಾಯ್ದೆ-1973ರ ಕಲಂ 144ರನ್ವಯ ಕಲಬುರಗಿ ನಗರ ಪೊಲೀಸ್ ಆಯುಕ್ತರಾದ ಡಾ. ವೈ.ಸಿ. ರವಿಕುಮಾರ್ ಅವರು ಕಲಬುರಗಿ ನಗರದಾದ್ಯಂತ ನಿಷೇಧಾಜ್ಞೆಯನ್ನು ಜಾರಿಗೊಳಿಸಿ ಸೋಮವಾರ ಆದೇಶ ಹೊರಡಿಸಿದ್ದಾರೆ.
ಅದೇ ರೀತಿ ಮೇಲ್ಕಂಡ ದಿನಾಂಕಗಳಂದು ಪ್ರತಿದಿನ ಬೆಳಗಿನ 6 ರಿಂದ ಮಧ್ಯಾಹ್ನ 12 ಗಂಟೆಯವರೆಗೆ ಮಾತ್ರ ಕೃಷಿ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ಪರಿಕರಗಳು, ಯಂತ್ರೋಪಕರಣಗಳು, ಬೀಜ ಹಾಗೂ ರಸಗೊಬ್ಬರ ಮಾರಾಟಕ್ಕೆ ಅನುಮತಿ ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss