ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಾಹಿತಿ ಬಾನು ಮುಷ್ತಾಕ್ ಅವರನ್ನು ಮೈಸೂರು ದಸರಾ ಉದ್ಘಾಟನೆಗೆ ಆಯ್ಕೆ ಮಾಡಿದ ರಾಜ್ಯ ಸರ್ಕಾರದ ನಿರ್ಧಾರ ಖಂಡಿಸಿ ಚಾಮುಂಡಿ ಚಲೋಗೆ ಮುಂದಾಗಿದ್ದ ಬಿಜೆಪಿ ಮತ್ತು ಹಿಂದೂ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಹಿಂದೂ ಜಾಗರಣಾ ವೇದಿಕೆ ಇಂದು ಚಾಮುಂಡಿ ಚಲೋ ಪಾದಯಾತ್ರೆಗೆ ಕರೆ ನೀಡಿತ್ತು. ಇನ್ನೊಂದು ಕಡೆ ಬಾನು ಮುಷ್ತಾಕ್ ಆಯ್ಕೆ ಸಮರ್ಥಿಸಿ ಪಾದಯಾತ್ರೆ ನಡೆಸಲು ದಲಿತ ಸಂಘಟನೆಗಳು ಕರೆ ನೀಡಿದ್ದವು. ಈ ಎರಡೂ ಪಾದಯಾತ್ರೆಗಳಿಗೆ ಪೊಲೀಸರು ಅನುಮತಿ ನೀಡಿರಲಿಲ್ಲ.
ಅನುಮತಿ ಇಲ್ಲದೇ ಇದ್ದರೂ ಹಿಂದೂ ಹಿಂದೂ ಜಾಗರಣಾ ವೇದಿಕೆಯ ಸದಸ್ಯರು ಪಾದಯಾತ್ರೆ ಮಾಡುವುದಾಗಿ ಪಟ್ಟು ಹಿಡಿದಿತ್ತು. ಹೀಗಾಗಿ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ 200ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿತ್ತು.