ಹೊಸದಿಗಂತ ಡಿಜಿಟಲ್ ಡೆಸ್ಕ್:
ದೇಶದ ವಿರುದ್ಧ ಚಟುವಟಿಕೆಗಳನ್ನು ಉತ್ತೇಜಿಸುತ್ತಿದೆ ಎಂಬ ಆರೋಪದ ಮೇಲೆ ಜಮ್ಮು ಮತ್ತು ಕಾಶ್ಮೀರ ಪೊಲೀಸರ ರಾಜ್ಯ ತನಿಖಾ ಸಂಸ್ಥೆ ಗುರುವಾರ ಇಲ್ಲಿನ ಕಾಶ್ಮೀರ ಟೈಮ್ಸ್ ಕಚೇರಿಯ ಮೇಲೆ ದಾಳಿ ಮಾಡಿದೆ.
“ದೇಶದ ಹಿತಾಸಕ್ತಿಗಳಿಗೆ ವಿರುದ್ಧವಾದ ಚಟುವಟಿಕೆಗಳನ್ನು ವೈಭವೀಕರಿಸಿದ್ದಕ್ಕಾಗಿ” ಪತ್ರಿಕೆಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಎಸ್‌ಐಎ ಅಧಿಕಾರಿಗಳು ಪತ್ರಿಕೆ ಮತ್ತು ಕಂಪ್ಯೂಟರ್‌ಗಳ ಮೇಲೆ ಸಂಪೂರ್ಣ ಶೋಧ ನಡೆಸಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಈ ಆರೋಪಗಳಿಗೆ ಸಂಬಂಧಿಸಿದಂತೆ ಕಾಶ್ಮೀರ ಟೈಮ್ಸ್‌ನ ಸಂಪಾದಕಿ ಅನುರಾಧಾ ಭಾಸಿನ್ ಅವರನ್ನು ಹೆಸರಿಸಿ ಎಸ್‌ಐಎ ಪ್ರಥಮ ಮಾಹಿತಿ ವರದಿ (ಎಫ್‌ಐಆರ್) ಸಲ್ಲಿಸಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ .

