ಬೆಳ್ಳಂಬೆಳಗ್ಗೆ ರೌಡಿಶೀಟರ್ ಗಳಿಗೆ ಶಾಕ್:‌ ಬೆಂಗಳೂರಿನ ಹಲವೆಡೆ ಪೊಲೀಸರ ದಾಳಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಇಂದು ಬೆಳ್ಳಂಬೆಳಗ್ಗೆ ಬೆಂಗಳೂರಿನಲ್ಲಿ ರೌಡಿಶೀಟರ್ ಗಳಿಗೆ ಪೊಲೀಸರು ಶಾಕ್ ನೀಡಿದ್ದು, ಬೆಂಗಳೂರು ನಗರದ 8 ವಿಭಾಗದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರೌಡಿಶೀಟರ್ ಗಳ ಮನೆ ಮೇಲೆ ದಾಳಿ ನಡೆಸಲಾಗಿದೆ.

ಬೆಂಗಳೂರು ಪೊಲೀಸ್ ಆಯುಕ್ತ ದಯಾನಂದ್ ಸೂಚನೆ ಮೇರೆಗೆ ನಗರದ ಸಾವಿರಕ್ಕೂ ಹೆಚ್ಚು ರೌಡಿಶೀಟರ್​ಗಳ ಮನೆಗಳಲ್ಲಿ ಪರಿಶೀಲನೆ ಮಾಡಲಾಗಿದ್ದು, ದಾಳಿ ವೇಳೆ ಹಲವರ ಮನೆಗಳಲ್ಲಿ ಮಾರಕಾಸ್ತ್ರಗಳು, ಗಾಂಜಾ ಪತ್ತೆಯಾಗಿದೆ. ಹಲಸೂರು, ಪುಲಕೇಶಿನಗರ, ಡಿಜೆ ಹಳ್ಳಿ, ಕೆ.ಜಿ ಹಳ್ಳಿ, ಕೋರಮಂಗಲ, ಮಡಿವಾಳ, ಆಡುಗೋಡಿ, ಮೈಕೋ ಲೇ ಔಟ್ ಸೇರಿ ಎಲ್ಲಾ ಠಾಣಾ ವ್ಯಾಪ್ತಿಯಲ್ಲಿ ದಾಳಿ ಮಾಡಲಾಗಿದೆ.

ಚುನಾವಣಾ ಸಂದರ್ಭದಲ್ಲಿ ಜೈಲು ಸೇರಿ ಬಿಡುಗಡೆಗೊಂಡಿರುವ ರೌಡಿಶೀಟರ್‌ಗಳಿಗೆ ಎಚ್ಚರಿಕೆ ನೀಡುವ ಸಲುವಾಗಿ ದಾಳಿ ಮಾಡಿ ಪರಿಶೀಲನೆ ನಡೆಸಿದ್ದು, ರೌಡಿ ಚಟುವಟಿಕೆಗಳಲ್ಲಿ ಭಾಗಿಯಾಗದಂತೆ ಎಚ್ಚರಿಕೆ ನೀಡಲಾಗಿದೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!