ಪಾಕಿಸ್ತಾನದ ಡ್ರೋನ್‌ನಿಂದ ಬಿದ್ದ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳು ಅರ್ನಿಯಾ ಪೊಲೀಸರ ವಶಕ್ಕೆ  

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಜಮ್ಮು ಮತ್ತು ಕಾಶ್ಮೀರದ ಅಂತರರಾಷ್ಟ್ರೀಯ ಗಡಿ (ಐಬಿ) ಬಳಿಯ ಟೋಪೆ ಗ್ರಾಮದಲ್ಲಿ ಪಾಕಿಸ್ತಾನದ ಡ್ರೋನ್ ಬೀಳಿಸಿದ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಅರ್ನಿಯಾ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದ ಜಮ್ಮುವಿನ ಓರ್ವ ಆರೋಪಿಯನ್ನು ಬಂಧಿಸಲಾಗಿದೆ ಎಂದು ವಿವರಿಸಿದರು.

ಆರೋಪಿಯನ್ನು ವಿಚಾರಣೆಗೆ ಒಳಪಡಿಸಿದಾಗ, ಡ್ರೋನ್ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳು ಬೀಳಿಸಿದ ಜಾಗದ ಮಾಹಿತಿ ಮಾಹಿತಿ ನೀಡಿದನು. ಆತ ಹೇಳಿದ ಪ್ರದೇಶದಲ್ಲಿ ಏನೂ ಪತ್ತೆಯಾಗಿಲ್ಲ, ಆದರೆ ಮತ್ತೊಂದು ಪ್ರದೇಶದಲ್ಲಿ (ತೋಪೆ ಗ್ರಾಮದಲ್ಲಿ) ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳು ಸಿಕ್ಕಿದ್ದು, ಎಲ್ಲವನ್ನು ವಶಪಡಿಸಿಕೊಳ್ಳಲಾಗಿದೆ ಎಂದರು. ಆ ವೇಳೆ ಆರೋಪಿ ಜತೆಗಿದ್ದು ಪೊಲೀಸರಿಂದ ಬಂದೂಕನ್ನು ಕಿತ್ತುಕೊಂಡು ಗುಂಡು ಹಾರಿಸಿ ಓಡಿ ಹೋಗಲು ಯತ್ನಿಸಿದ ಎಂದಿದ್ದಾರೆ.

ಕೂಡಲೇ ಅಪ್ರಮತ್ತರಾದ ಪೊಲೀಸರು ಆರೋಪಿ ಮೇಲೆ ಗುಂಡು ಹಾರಿಸಿ ಕೊನೆಗೂ ಆತನನ್ನು ವಶಕ್ಕೆ ಪಡೆದು ಆಸ್ಪತ್ರೆಗೆ ದಾಖಲಿಸಿದ್ದಾರೆ. ಘಟನೆಯಲ್ಲಿ ಆರೋಪಿ ಸಹಿತ ಪೊಲೀಸ್ ಅಧಿಕಾರಿ ಗಾಯಗೊಂಡಿದ್ದಾರೆ ಎನ್ನಲಾಗಿದೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಪಿ ಮೃತಪಟ್ಟಿದ್ದಾನೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಪಾಕಿಸ್ತಾನ ಡ್ರೋನ್‌ಗಳ ಹಾರಾಟ ಜಾಸ್ತಿಯಾಗಿದೆ. ಇವುಗಳ ಸಹಾಯದಿಂದ ಶಸ್ತ್ರಾಸ್ತ್ರಗಳು ಮತ್ತು ಸ್ಫೋಟಕಗಳನ್ನು ಕಳುಹಿಸುವ ಮೂಲಕ ಪಾಕಿಸ್ತಾನ ಭಯೋತ್ಪಾದಕರಿಗೆ ಸಹಾಯ ಮಾಡುತ್ತಿದೆ. ಭಾರತೀಯ ಭದ್ರತಾ ಪಡೆಗಳು ಪಾಕಿಸ್ತಾನದ ಚಟುವಟಿಕೆಗಳ ಮೇಲೆ ನಿಗಾ ಇಟ್ಟಿದ್ದು, ಪಾಕಿಸ್ತಾನದಿಂದ ಬರುತ್ತಿರುವ ಡ್ರೋನ್‌ಗಳನ್ನು ಹೊಡೆದುರುಳಿಸಲಾಗುತ್ತಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!