ಹೊಸದಿಗಂತ ವರದಿ, ವಿಜಯಪುರ:
ಜಿಲ್ಲೆಯ ತಿಕೋಟಾ ತಾಲೂಕಿನ ರತ್ನಾಪುರ ಗ್ರಾಮದ ಜಮೀನೊಂದರಲ್ಲಿ ಅಕ್ರಮವಾಗಿ ಬೆಳೆದಿದ್ದ 5.30 ಲಕ್ಷ ಮೌಲ್ಯದ 53 ಕೆಜಿ ಅಕ್ರಮ ಗಾಂಜಾವನ್ನು ಅಬಕಾರಿ ಪೊಲೀಸರು ಜಪ್ತಿ ಮಾಡಿದ್ದಾರೆ.
ಆರೋಪಿ ರಾಮು ಗಗನಮಾಲಿ, ಇತರೆ ಬೆಳೆಗಳ ಮಧ್ಯೆ ಅಕ್ರಮವಾಗಿ ಗಾಂಜಾ ಬೆಳೆದಿರುವ ಖಚಿತ ಮಾಹಿತಿ ಮೇರೆಗೆ ಅಬಕಾರಿ ಪೊಲೀಸರು ದಾಳಿ ನಡೆಸಿದ್ದು, 53 ಕೆಜಿ ಗಾಂಜಾವನ್ನು ಜಪ್ತಿ ಮಾಡಲಾಗಿದ್ದು, ಆರೋಪಿ ಪರಾರಿಯಾಗಿದ್ದಾನೆ.
ಆರೋಪಿ ವಿರುದ್ಧ ಎನ್ ಡಿಪಿಎಸ್ ಕಾಯ್ದೆ ಅಡಿ ಪ್ರಕರಣ ದಾಖಲಾಗಿದೆ.