ಹೊಸದಿಗಂತ ಡಿಜಿಟಲ್ ಡೆಸ್ಕ್:
ಹಾಸ್ಯ ಕಲಾವಿದ ಕುನಾಲ್ ಕಾಮ್ರಾರ ವಿವಾದಾತ್ಮಕ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಪ್ರೇಕ್ಷಕರೊಬ್ಬರಿಗೆ ಮುಂಬೈ ಪೊಲೀಸರು ನೋಟಿಸ್ ಜಾರಿಮಾಡಿದ ಘಟನೆ ನಡೆದಿದ್ದು, ಈ ನಡುವೆ ಅಭಿಮಾನಿಗಳಿಗೆ ಕಾಮ್ರಾ ಕ್ಷಮೆಯಾಚಿಸಿದ್ದಾರೆ.
ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಪ್ರೇಕ್ಷಕರೊಬ್ಬರನ್ನು ಸಾಕ್ಷಿಯನ್ನಾಗಿಸಿ, ಕಾಮ್ರಾ ವಿರುದ್ಧ ಸಮನ್ಸ್ ಜಾರಿ ಮಾಡಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಹಾಸ್ಯ ಕಲಾವಿದ ಕುನಾಲ್ ಕಾಮ್ರಾ ಅವರು ಈಚೆಗೆ ಕಾರ್ಯಕ್ರಮವೊಂದರಲ್ಲಿ ಏಕನಾಥ ಶಿಂದೆ ಅವರನ್ನು ‘ವಂಚಕ’ ಎಂದು ಕರೆಯುವ ಮೂಲಕ ರಾಜಕೀಯ ವೃತ್ತಿಜೀವನವನ್ನು ಟೀಕಿಸಿದ್ದರು. ಇದು ಮಹಾರಾಷ್ಟ್ರ ರಾಜಕೀಯದಲ್ಲಿ ದೊಡ್ಡ ಬಿರುಗಾಳಿ ಎಬ್ಬಿಸಿತ್ತು.