ಹೊಸದಿಗಂತ ಡಿಜಿಟಲ್ ಡೆಸ್ಕ್:
ಮೂರು ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿರುವ ಆರೋಪಿಯ ಕಾಲಿಗೆ ಪೊಲೀಸರು ಗುಂಡು ಹಾರಿಸಿರುವ ಘಟನೆ ಉತ್ತರ ಪ್ರದೇಶದ ಗಾಜಿಪುರದಲ್ಲಿ ನಡೆದಿದೆ.
ಆರೋಪಿ ಕುಂದನ್ ಕಶ್ಯಪ್ ಲಕ್ನೋ ಜಿಲ್ಲೆಯ ಇಂದಿರಾ ನಗರದ ನಿವಾಸಿ. ಆರೋಪಿ ತನಗೆ ಪರಿಚಯವಿರುವ ಮಗುವಿಗೆ ಚಾಕೊಲೇಟ್ ನೀಡುವ ಆಸೆ ತೋರಿಸಿ ಕರೆದೊಯ್ದು ಅತ್ಯಾಚಾರವೆಸಗಿದ್ದಾನೆ. ಅತ್ಯಾಚಾರದ ಬಗ್ಗೆ ಮಾಹಿತಿ ತಿಳಿದ ತಕ್ಷಣ ಪೋಷಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಆತನ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಬಳಿಕ ಆತ ಪೊಲೀಸರ ಕಣ್ಣಿನಿಂದ ತಪ್ಪಿಸಿಕೊಂಡಿದ್ದಾನೆ, ಬಾಲಕಿ ಮನೆಯಿಂದ ಹೊರಗೆ ಆಟವಾಡುತ್ತಿದ್ದಾಗ ಆತ ಬಂದು ಚಾಕೊಲೇಟ್ ನೀಡುವುದಾಗಿ ಹೇಳಿದ್ದಾನೆ. ಆಗ ಮಗು ಆತನನ್ನು ನಂಬಿ ಹೋಗಿದೆ, ಆಗ ಪುಟ್ಟ ಮಗು ಎಂದೂ ನೋಡದೆ ಅತ್ಯಾಚಾರವೆಸಗಿದ್ದಾನೆ. ಇದಾದ ಬಳಿಕ ಪೋಷಕರು ಪೊಲೀಸರಿಗೆ ದೂರು ನೀಡಿದ್ದಾರೆ. ಪೊಲೀಸರು ಕೂಡ ಆತನ ಹುಡುಕಾಟಕ್ಕೆ ಮುಂದಾಗಿದ್ದಾರೆ, ಬಳಿಕ ಆತ ಓಡಿ ಹೋಗಲು ಯತ್ನಿಸಿದಾಗ ಕಾಲಿಗೆ ಗುಂಡು ಹಾರಿಸಿ ಆತನನ್ನು ಬಂಧಿಸಿರುವ ಘಟನೆ ಗಾಜಿಯಾಬಾದ್ನಲ್ಲಿ ನಡೆದಿದೆ.
ಮಗು ಪರಿಸ್ಥಿತಿ ಹೇಗಿದೆ ಎನ್ನುವ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ.