ಅಪರಾಧ ಪ್ರಕರಣಗಳನ್ನು ಪೊಲೀಸರು ಸೂಕ್ತವಾಗಿ ನಿಭಾಯಿಸಬೇಕು: ಜಿಲ್ಲಾಧಿಕಾರಿ ಗುರುದತ್ತ ಹೆಗಡೆ

ಹೊಸದಿಗಂತ ವರದಿ ಹುಬ್ಬಳ್ಳಿ:
ಪ್ರಸ್ತುತವಾಗಿ ಪೊಲೀಸ್ ಇಲಾಖೆಗೆ ಹಲವಾರು ಸವಾಲುಗಳು ಎದುರಾಗುತ್ತಿವೆ. ಸೈಬರ್ ಕ್ರೈಂ ಹಾಗೂ ಮಹಿಳೆ ಮತ್ತು ಮಕ್ಕಳ ಮೇಲೆ ಇತ್ತೀಚೆಗೆ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳನ್ನು ಪೊಲೀಸರು ಸೂಕ್ತವಾಗಿ ನಿಭಾಯಿಸಬೇಕು ಎಂದು ಜಿಲ್ಲಾಧಿಕಾರಿ ಗುರದತ್ತ ಹೆಗಡೆ‌ ಹೇಳಿದರು.

ನಗರದ ಕಾರವಾರ ರಸ್ತೆಯ ಹಳೇ ಸಿ.ಎ.ಆರ್. ಮೈದಾನದಲ್ಲಿ ಶುಕ್ರವಾರ ನಡೆದ ಪೊಲೀಸ್ ಸಂಸ್ಮರಣ ದಿನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಜಿಲ್ಲಾಡಳಿತದಿಂದ ಪೊಲೀಸ್ ಇಲಾಖೆಗೆ ಸಂಪೂರ್ಣ ಸಹಕಾರವಿದ್ದು, ಬರುವ ವರ್ಷದಲ್ಲಿ ಪ್ರಮುಖ ಬೇಡಿಕೆಯಾದ ಜಿಲ್ಲೆಯಲ್ಲಿ ಫೈಯರ್ ರೇಂಜ್ ಗೆ ಸ್ಥಳಾವಕಾಶ ಕಲ್ಪಿಸಲಾಗುತ್ತದೆ ಎಂದರು.

‘ಅಪರಾಧ ಚಟುವಟಿಕೆಗಳನ್ನು ನಿಯಂತ್ರಿಸಲು ಪೊಲೀಸ್ ಇಲಾಖೆ ಸಾಕಷ್ಟು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುತ್ತಿವೆ. ಆದರೂ ಅಪರಾಧ ಚಟುವಟಿಕೆಗಳು ಹೊಸ ಹೊಸ ಆಯಾಮಗಳಲ್ಲಿ ನಡೆಯುತ್ತಿವೆ. ಇವಗಳ ಸೂಕ್ತವಾಗಿ ನಿಭಾಯಿಸುವ ಹೊಣೆ ಅವರ ಮೇಲಿದೆ ಎಂದು ತಿಳಿಸಿದರು.

ಪ್ರಸ್ತುತ ವರ್ಷ ದೇಶದಲ್ಲಿ ಕರ್ತವ್ಯದಲ್ಲಿದ್ದಾಗ 264 ಪೊಲೀಸ್ ಸಿಬ್ಬಂದಿ ಮೃತಪಟ್ಟಿದ್ದಾರೆ. ಅವರಲ್ಲಿ ರಾಜ್ಯದ11 ಮಂದಿಯಿದ್ದು, ಧಾರವಾಡ ಜಿಲ್ಲೆಯ ಇಬ್ಬರು ಇದ್ದಾರೆ’ ಕಮಿಷನರ್ ಲಾಭೂ ರಾಮ್ ತಿಳಿಸಿದರು. ಈ ಸಂದರ್ಭದಲ್ಲಿ ಹುತಾತ್ಮ‌ ವೀರ ಪೊಲೀಸರಿಗೆ ಗೌರವಿಸಲಾಯಿತು.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!