ಪೊಲೀಸ್ ಸಬ್ ಇನ್ ಸ್ಪೆಕ್ಟರ್ ಹುದ್ದೆಗಳಿಗೆ ಮರು ಪರೀಕ್ಷೆ ನಡೆಸಲು ಸಿದ್ಧ: ಡಿಜಿಪಿ ಪ್ರವೀಣ್ ಸೂದ್

ಹೊಸ ದಿಗಂತ ಡಿಜಿಟಲ್ ಡೆಸ್ಕ್:

545 ಪಿಎಸ್‌ಐ ನೇಮಕಾತಿಯಲ್ಲಿ ಅಕ್ರಮ ನಡೆದ ಕಾರಣ ನೇಮಕಾತಿಯನ್ನೇ ರಾಜ್ಯ ಸರ್ಕಾರ ರದ್ದುಗೊಳಿಸಿತ್ತು. ಈ ಹುದ್ದೆಗಳಿಗೆ ಮರು ಪರೀಕ್ಷೆ ನಡೆವುದಾಗಿ ಹೇಳಿತ್ತು. ಇದೀಗ ಮರು ಪರೀಕ್ಷೆ ನಡೆಸಲು ನಾವು ಸಿದ್ಧರಿರುವುದಾಗಿ ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಹೇಳಿದ್ದಾರೆ.

ಈ ಬಗ್ಗೆ ಟ್ವಿಟ್ ಮಾಡಿರುವಂತ ಪ್ರವೀಣ್ ಸೂದ್, ಆರ್ ಎಸ್‌ಐ ( ಸಿಎಆರ್ ಮತ್ತು ಡಿಎಆರ್ ), ವಿಶೇಷ ಆರ್ ಎಸ್‌ಐ ( ಕೆ ಎಸ್ ಆರ್ ಪಿ ) ಹಾಗೂ ಪಿಎಸ್‌ಎ ( ರಾಜ್ಯ ಕೈಗಾರಿಕಾ ಭದ್ರತಾ ಪಡೆ) ಗಳಿಗೆ ಪರೀಕ್ಷೆಯನ್ನು ನಡೆಸಲಾಗಿದೆ ಎಂದು ತಿಳಿಸಿದ್ದಾರೆ.

545 ಪಿಎಸ್‌ಐ ನೇಮಕಾತಿ ಸಂಬಂಧ ಪ್ರಕರಣ ನ್ಯಾಯಾಲಯದಲ್ಲಿದೆ. ನ್ಯಾಯಾಲಯದ ಆದೇಶಕ್ಕಾಗಿ ನಾವು ಕಾಯುತ್ತಿದ್ದೇವೆ. ನ್ಯಾಯಾಲಯದ ಅಂತಿಮ ಆದೇಶಕ್ಕೆ ಇಲಾಖೆ ಬದ್ಧವಾಗಿ ಪರೀಕ್ಷೆ ನಡೆಸಲು ನಾವು ಸಿದ್ಧ ಎಂದು ಹೇಳಿದರು.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!