ಮಾಸ್ಕ್ ಧರಿಸದ ಸಾರ್ವಜನಿಕರಿಗೆ ದಂಡ-ಪೊಲೀಸರಿಂದ ಪಾಠ

ಹೊಸದಿಗಂತ ವರದಿ, ಮಂಡ್ಯ:

ಕೊರೋನಾ 3ನೇ ಅಲೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ನಗರದ ವಿವಿಧೆಡೆ ಪೊಲೀಸರು ಮಾಸ್ಕ್ ಧರಿಸದೆ ಸಂಚರಿಸುತ್ತಿದ್ದ ಸಾರ್ವಜನಿಕರಿಗೆ ದಂಡ ವಿಧಿಸಿ ಎಚ್ಚರಿಕೆ ನೀಡಿದ್ದಾರೆ.
ನಗರದ ಹೊಳಲು ವೃತ್ತ, ಪೇಟೆ ಬೀದಿ, ಡಿಸಿಸಿ ಬ್ಯಾಂಕ್ ರಸ್ತೆ ಸೇರಿದಂತೆ ನಗರದ ವಿವಿಧೆಡೆ ಪೊಲೀಸರು ಮಾಸ್ಕ್ ಧರಿಸದ ಸಾರ್ವಜನಿಕರಿಗೆ ದಂಡ ವಿಧಿಸಿ ಅರಿವು ಮೂಡಿಸಿದರು.
ಜನನಿಬಿಡ ಪ್ರದೇಶಗಳಲ್ಲಿ ಗುಂಪು ಸೇರುವ ಜನರಿಗೆ ಮಾಸ್ಕ್ ಧರಿಸುವಂತೆ ಎಚ್ಚರಿಕೆ ನೀಡುತ್ತಿದ್ದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಜಾಗೃತಿ ಮೂಡಿಸುತ್ತಿದ್ದಾರೆ.
ರಸ್ತೆಯಲ್ಲೇ ಬ್ಯಾರಿಕೇಟ್‌ಗಳನ್ನು ಅಳವಡಿಸಿ ಗ್ರಾಮಾಂತರ ಪ್ರದೇಶಗಳಿಂದ ನಗರಕ್ಕೆ ಬರುತ್ತಿದ್ದವರನ್ನು ಅಡ್ಡಗಟ್ಟಿ ಮಾಸ್ಕ್ ಧರಿಸದೆ ಓಡಾಡುತ್ತಿದ್ದವರಿಗೆ ಬಿಸಿ ಮುಟ್ಟಿಸಿದ್ದಾರೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!