ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………
ಹೊಸದಿಗಂತ ಆನ್ಲೈನ್ ಡೆಸ್ಕ್:
ಮಾಜಿ ಸಿಎಂ ಕುಮಾರಸ್ವಾಮಿ ಹಾಗು ಸಂಸದೆ ಸುಮಲತಾ ಅಂಬರೀಷ್ ಕಾದಾಟ ತಾರಕಕ್ಕೇರಿದ್ದು, ಸುಮಲತಾ ಹಾಗೂ ರಾಕ್ಲೈನ್ ವೆಂಕಟೇಶ್ ಮನೆಗೆ ಪೊಲೀಸ್ ಭದ್ರತೆ ಒದಗಿಸಲಾಗಿದೆ.
ರಾಕ್ಲೈನ್ ವೆಂಕಟೇಶ್ ಮನೆ ಬಳಿ ಈಗಾಗಲೇ ಬ್ಯಾರಿಕೇಡ್ ಹಾಕಿದ್ದರೂ ಜೆಡಿಎಸ್ ಕಾರ್ಯಕರ್ತರು ನುಗ್ಗಿ ಗಲಾಟೆ ಮಾಡಿದ್ದಾರೆ.
ರಾಕ್ಲೈನ್ ಮನೆ ಮುಂದೆ ನಡೆಯುತ್ತಿರುವ ಗಲಾಟೆಯಿಂದ ಎಚ್ಚೆತ್ತ ಪೊಲೀಸರು ಇದೀಗ ಜೆ.ಪಿ. ನಗರದಲ್ಲಿ ಇರುವ ಸುಮಲತಾ ಅವರ ಮನೆಗೂ ಬಿಗಿ ಭದ್ರತೆ ಒದಗಿಸಿದ್ದಾರೆ.
ಕೆಲ ದಿನಗಳಿಂದ ಸುಮಲತಾ ಹಾಗೂ ಕುಮಾರಸ್ವಾಮಿ ನಡುವೆ ವಾಗ್ವಾದ ನಡೆಯುತ್ತಿದ್ದು, ವಿಷಯ ಎಲ್ಲೆಲ್ಲಿಗೋ ಹೋಗಿ ಮುಟ್ಟಿತ್ತು, ಸುಮಲತಾ ಪರ ದೊಡ್ಡಣ್ಣ ಹಾಗೂ ರಾಕ್ಲೈನ್ ವೆಂಕಟೇಶ್ ಕೂಡ ಮಾತನಾಡಿದ್ದು, ಇದೀಗ ರಾಕ್ಲೈನ್ ಮನೆಗೆ ಬಿಗಿ ಭದ್ರತೆ ನೀಡಲಾಗಿದೆ.