ತಕ್ಷಣವೇ ಕಾರ್ಯಕ್ರಮ ಮಾಡ್ಬೇಡಿ ಎಂದು ಹೇಳಿದ್ರೂ ಕೇಳಲಿಲ್ಲ: ಪೊಲೀಸರ ಅಸಮಾಧಾನ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಆರ್​ಸಿಬಿ ಐಪಿಎಲ್ ಟ್ರೋಫಿ ಗೆಲುವಿನ ಸಂಭ್ರಮಾಚರಣೆ ಸಂದರ್ಭದಲ್ಲಿ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಹೊರಗೆ ಕಾಲ್ತುಳಿತ ಸಂಭವಿಸಿ 11 ಮಂದಿ ಮೃತಪಟ್ಟ ಬೆನ್ನಲ್ಲೇ, ಹಠಾತ್ತಾಗಿ ಕಾರ್ಯಕ್ರಮ ಆಯೋಜಿಸಿದ್ದರ ಬಗ್ಗೆ ಹಿರಿಯ ಪೊಲೀಸ್ ಅಧಿಕಾರಿಗಳು ಅಸಮಾಧಾನದ ಮಾತುಗಳನ್ನಾಡಿದ್ದಾರೆ.

ಪೊಲೀಸರ ಸಲಹೆ ಧಿಕ್ಕರಿಸಿ ತಕ್ಷಣದ ಸಂಭ್ರಮಾಚರಣೆ ಮಾಡಿದ್ದೇ ಘಟನೆಗೆ ಪ್ರಮುಖ ಕಾರಣವಾಯಿತು ಎಂಬುದೂ ಇದರಿಂದ ತಿಳಿದುಬಂದಿದೆ. ತಕ್ಷಣವೇ ಸಂಭ್ರಮಾಚರಣೆ ಕಾರ್ಯಕ್ರಮ ಆಯೋಜಿಸುವ ಬದಲು ಒಂದು ವಾರದ ನಂತರ ಮಾಡುವಂತೆ ಸಲಹೆ ನೀಡಲಾಗಿತ್ತು. ಆದರೆ ಅದನ್ನು ಕಡೆಗಣಿಸಲಾಯಿತು ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ಬೇಸರ ವ್ಯಕ್ತಪಡಿಸಿರುವುದಾಗಿ ಪತ್ರಿಕಾ ವರದಿಯೊಂದು ಉಲ್ಲೇಖಿಸಿದೆ.

ಐಪಿಎಲ್ ಫೈನಲ್​ನಲ್ಲಿ ಆರ್​ಸಿಬಿ ಗೆಲುವಿಗೆ ಸಂಬಂಧಿಸಿ ಬುಧವಾರ ಯಾವುದೇ ಕಾರ್ಯಕ್ರಮಗಳನ್ನು ನಡೆಸದಂತೆ ಮಂಗಳವಾರ ರಾತ್ರಿಯಿಂದಲೇ ಸರ್ಕಾರ ಮತ್ತು ಫ್ರಾಂಚೈಸಿಗೆ ಮನವರಿಕೆ ಮಾಡಿಕೊಡಲು ಪ್ರಯತ್ನಿಸಿದ್ದೆವು. ಜನರ ಭಾವನೆ, ಉದ್ವೇಗ ತುಸು ತಣ್ಣಗಾದ ನಂತರ ಕಾರ್ಯಕ್ರಮ ಆಯೋಜಿಸುವುದು ಸೂಕ್ತ ಎಂಬ ಸಲಹೆ ನೀಡಿದ್ದೆವು. ಮುಂದಿನ ಭಾನುವಾರ ಕಾರ್ಯಕ್ರಮ ಆಯೋಜಿಸಲು ಶಿಫಾರಸು ಮಾಡಿದ್ದೆವು  ಎಂದು ಹೇಳಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!