ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ಜಲಫಿರಂಗಿ ಪ್ರಯೋಗ: ತೇಜಸ್ವಿ ಸೂರ್ಯ ಆಕ್ರೋಶ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ದೀದಿ ಸರ್ಕಾರದ ವಿರುದ್ಧ ಪ್ರತಿಭಟನಾ ರ್ಯಾಲಿ ನಡೆಸುತ್ತಿದ್ದ ಬಿಜೆಪಿ ಕಾರ್ಯಕರ್ತರ ಮೇಲೆ ಅಲ್ಲಿನ ಪೊಲೀಸರು ಜಲಫಿರಂಗಿ ಪ್ರಯೋಗಿಸಿದ್ದಾರೆ. ಪಶ್ಚಿಮ ಬಂಗಾಳದ ಮಮತಾ ಬ್ಯಾನರ್ಜಿ ಸರ್ಕಾರದಲ್ಲಿ ಶಿಕ್ಷಣ ಇಲಾಖೆಯಲ್ಲಿನ ಅತಿರೇಕದ ಭ್ರಷ್ಟಾಚಾರ ಮತ್ತು ರಾಜಕೀಯೀಕರಣದ ವಿರುದ್ಧ ಪ್ರತಿಭಟನೆ ನಡೆಸಿದರು.

ಸಂಸದ ಹಾಗೂ ಬಿಜೆವೈಎಂ ರಾಷ್ಟ್ರೀಯ ಅಧ್ಯಕ್ಷ ತೇಜಸ್ವಿ ಸೂರ್ಯ ನೇತೃತ್ವದಲ್ಲಿ ಪ್ರತಿಭಟನಾ ರ್ಯಾಲಿ ನಡೆಯುತ್ತಿತ್ತು. ಕೋಲ್ಕತ್ತಾದ ಬಿಕಾಶ್ ಭವನದ ಕಡೆಗೆ ತೆರಳುತ್ತಿದ್ದ ಬಿಜೆಪಿ ಕಾರ್ಯಕರ್ತರನ್ನು ಚದುರಿಸಲು ಪಶ್ಚಿಮ ಬಂಗಾಳ ಪೊಲೀಸರು ಜಲಫಿರಂಗಿ ಪ್ರಯೋಗಿಸಿದ್ದಾರೆ.

ಈ ಬಗ್ಗೆ ತೇಜಸ್ವಿ ಸೂರ್ಯ ಪ್ರತಿಕ್ರಿಯಿಸಿದ್ದು, ನಮ್ಮ ಕಾರ್ಯಕರ್ತರನ್ನು ಸೀಲ್ದಾ, ಹೌರಾ ಮತ್ತು ಇತರ ರೈಲ್ವೇ ನಿಲ್ದಾಣಗಳಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಟಿಎಂಸಿ ಗೂಂಡಾಗಳು ವಿವಿಧ ಅಸೆಂಬ್ಲಿ ಸ್ಥಳಗಳಲ್ಲಿ ನಮ್ಮ ಕಾರ್ಯಕರ್ತರ ಮೇಲೆ ದಾಳಿ ಮಾಡುತ್ತಿದ್ದಾರೆ. ಇದೀಗ ರ್ಯಾಲಿ ನಡೆಸುತ್ತಿದ್ದ ಬಿಜೆಪಿ ಕಾರ್ಯಕರ್ತರ ಮೇಲೆ ಜಲಫಿರಂಗಿ ಪ್ರಯೋಗ ಮಾಡಿದ್ದಾರೆ. ಶಾಂತಿಯುತವಾಗಿ ಸಭೆ ಸೇರುವ ಸಾಂವಿಧಾನಿಕ ಹಕ್ಕನ್ನು ಮಮತಾ ಬ್ಯಾನರ್ಜಿ ಸರ್ಕಾರ ಹತ್ತಿಕ್ಕುವ ಪ್ರಯತ್ನ ಮಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!