ಹೊಸದಿಗಂತ ಡಿಜಿಟಲ್ ಡೆಸ್ಕ್:
‘ದೆಹಲಿ ಚಲೋ’ ಪ್ರತಿಭಟನಾನಿರತ ರೈತ ನಾಯಕರ ವಿರುದ್ಧ ರಾಷ್ಟ್ರೀಯ ಭದ್ರತಾ ಕಾಯ್ದೆ (ಎನ್‌ಎಸ್‌ಎ) ಅಡಿ ಕ್ರಮ ಕೈಗೊಳ್ಳಲು ಮುಂದಾಗಿದ್ದ ಹರಿಯಾಣ ಪೊಲೀಸರು, ತನ್ನ ನಿರ್ಧಾರದಿಂದ ಹಿಂದೆ ಸರಿದಿದ್ದಾರೆ.
ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಸಲುವಾಗಿ, ಪ್ರತಿಭಟನಾನಿರತ ರೈತ ಸಂಘಟನೆಗಳ ಮುಖಂಡರ ವಿರುದ್ಧ ರಾಷ್ಟ್ರೀಯ ಭದ್ರತಾ ಕಾಯ್ದೆ-1980ರ ಸೆಕ್ಷನ್ 2(3) ಅಡಿಯಲ್ಲಿ ಕ್ರಮ ಕೈಗೊಳ್ಳುವುದಾಗಿ ಅಂಬಾಲ ಪೊಲೀಸರು ಗುರುವಾರವಷ್ಟೇ ಪ್ರಕಟಿಸಿದ್ದರು.
ಇದೀಗ ಐಜಿಪಿ (ಅಂಬಾಲ ವಲಯ) ಸಿಬಾಷ್ ಕಬಿರಾಜ್ ಅವರು, ‘ರೈತ ನಾಯಕರ ವಿರುದ್ಧ ರಾಷ್ಟ್ರೀಯ ಭದ್ರತಾ ಕಾಯ್ದೆ ಅಡಿಯಲ್ಲಿ ಕ್ರಮ ಕೈಗೊಳ್ಳಲು ಉದ್ದೇಶಿಸಿದ್ದ ನಿರ್ಧಾರವನ್ನು ಮರುಪರಿಶೀಲಿಸಲಾಗಿದೆ. ಇದೀಗ ಆ ರೀತಿಯ ಕ್ರಮ ಕೈಗೊಳ್ಳದಿರಲು ತೀರ್ಮಾನಿಸಲಾಗಿದೆ’ ಎಂದು ತಿಳಿಸಿದ್ದಾರೆ.
ಪ್ರತಿಭಟನಾನಿರತ ರೈತರು ಮತ್ತು ರೈತರ ನಾಯಕರು ಶಾಂತಿ ಕಾಪಾಡಬೇಕು. ಆಡಳಿತಗಳಿಗೆ ಸಹಕರಿಸಬೇಕು ಎಂದೂ ಮನವಿ ಮಾಡಿದ್ದಾರೆ.