ಚಂದ್ರಶೇಖರ್‌ ನಿಗೂಢ ಸಾವು ಪ್ರಕರಣ: ಪೊಲೀಸರ ಕೈ ಸೇರದ ಎಫ್‌ಎಸ್‌ಎಲ್‌, ಮರಣೋತ್ತರ ಪರೀಕ್ಷೆ ವರದಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಹೊನ್ನಾಳಿ ಬಿಜೆಪಿ ಶಾಸಕ ಎಂ.ಪಿ.ರೇಣುಕಾಚಾರ್ಯ ಸಹೋದರ ರಮೇಶ್ ಪುತ್ರ ಚಂದ್ರಶೇಖರ್ ನಿಗೂಢ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ದಾವಣಗೆರೆ ಎಸ್ಪಿ ಸಿ.ಬಿ.ರಿಷ್ಯಂತ್‌ ಪ್ರತಿಕ್ರಿಸಿದ್ದಾರೆ. ಇಂದು ಬೆಳಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮರಣೋತ್ತರ ಪರೀಕ್ಷೆ ವರದಿ ಹಾಗೂ ಎಫ್‌ಎಸ್‌ಎಲ್‌ ವರದಿ ಇನ್ನೂ ಪೊಲೀಸರ ಕೈ ಸೇರಿಲ್ಲ. ಆ ಎಲ್ಲ ವರದಿಗಳು ಬಂದ ನಂತರವಷ್ಟೇ ಒಂದು ಸ್ಪಷ್ಟ ಚಿತ್ರಣ ಸಿಗಲಿದೆ ಎಂಬ ಮಾತನ್ನು ಹೇಳಿದರು.

ತನಿಖೆ ಪ್ರಕ್ರಿಯೆ ಪೂರ್ಣವಾದ ಬಳಿಕ ಎಲ್ಲವೂ ಗೊತ್ತಾಗಲಿದೆ. ಒಂದೆರಡು ದಿನಗಳಲ್ಲಿ ಎಲ್ಲಾ ವರದಿ ಸಿಗುವ ನಿರೀಕ್ಷೆ ಇದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ.ರಿಷ್ಯಂತ್ ಹೇಳಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!