Saturday, June 25, 2022

Latest Posts

ಕಲಬುರಗಿ| ಪಾಲಿಕೆ ಚುನಾವಣಾ ಪ್ರಚಾರ: ನಗರಕ್ಕೆ ಆಗಮಿಸಿದ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸ ದಿಗಂತ ವರದಿ ಕಲಬುರಗಿ:

ಕಲಬುರಗಿ ಮಹಾ ನಗರ ಪಾಲಿಕೆ ಚುನಾವಣಾ ಕಾವು ದಿನೇ ದಿನೇ ರಂಗೇರುತ್ತಿದ್ದು, ಜೆಡಿಎಸ್ ಅಭ್ಯರ್ಥಿ ಗಳ ಪರ ಪ್ರಚಾರಕ್ಕಾಗಿ ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆಗಮಿಸಿದರು.

ಕಲಬುರಗಿ ವಿಮಾನ ನಿಲ್ದಾಣದಲ್ಲಿ ಜೆಡಿಎಸ್ ಪದಾಧಿಕಾರಿಗಳು ಅವರನ್ನು ಆತ್ಮೀಯವಾಗಿ ಹೂ ಗುಚ್ಛ ನೀಡಿ ಸ್ವಾಗತಿಸಿದರು.

ಕಲಬುರಗಿ ಪಾಲಿಕೆ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದಿಂದ 47 ಅಭ್ಯರ್ಥಿ ಗಳು ಪಾಲಿಕೆ ಕಣದಲ್ಲಿ ಸ್ಪದಿ೯ಸಿದ್ದು, ರಾಜಾಪುರ ಕಾಲೋನಿ,ಸಂಗಮೇಶ್ವರ ಕಾಲೋನಿ ಸೇರಿದಂತೆ ಹಲವು ವಾಡ೯ಗಳಲ್ಲಿ ಕುಮಾರಸ್ವಾಮಿ ಮತಯಾಚನೆ ಮಾಡಲಿದ್ದಾರೆ.

ಜೆಡಿಎಸ್ ಜಿಲ್ಲಾಧ್ಯಕ್ಷ ಕೇದಾರಲಿಂಗಯ್ಯ ಹಿರೇಮಠ, ಜೆಡಿಎಸ್ ಅಲ್ಪಸಂಖ್ಯಾತರ ರಾಜ್ಯಾಧ್ಯಕ್ಷ ನಾಸಿರ್ ಹುಸೇನ್ ,ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಾಮರಾವ್ ಸೂರನ್,ಜೆಡಿಎಸ್ ಗುಲ್ಬರ್ಗ ಉಸ್ತುವಾರಿ ತಿಮ್ಮಯ್ಯ ಪುರ್ಲೆ ಸೇರಿ ಜೆಡಿಎಸ್ ನ ಅನೇಕ ಮುಖಂಡರು ಕಾರ್ಯಕರ್ತರಿಂದ ಅದ್ದೂರಿಯಾಗಿ ಸ್ವಾಗತ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss