ನನ್ನ ವಿರುದ್ಧ ರಾಜಕೀಯ ಷಡ್ಯಂತ್ರ: ಎಚ್‌.ಡಿ. ರೇವಣ್ಣ ಫಸ್ಟ್‌ ರಿಯಾಕ್ಷನ್‌

ಹೊಸದಿಗಂತ ಡಿಜಿಟಲ್ ಡೆಸ್ಕ್:

ನನ್ನ ವಿರುದ್ಧವಾಗಿ ನಡೆಯುತ್ತಿರುವ ರಾಜಕೀಯ ಷಡ್ಯಂತ್ರ ಇದು ಎಂದು ಹೆಚ್.ಡಿ. ರೇವಣ್ಣ ಹೇಳಿದ್ದಾರೆ.

ಸಂತ್ರಸ್ತ ಮಹಿಳೆಯನ್ನು ಕಿಡ್ನಾಪ್ ಮಾಡಿದ ಆರೋಪದಲ್ಲಿ ಎಸ್‌ಐಟಿ ಪೊಲೀಸರಿಂದ ಬಂಧನವಾಗಿರುವ ಶಾಸಕ ಹೆಚ್.ಡಿ. ರೇವಣ್ಣ ಅವರು ಮೊಟ್ಟ ಮೊದಲ ಬಾರಿಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ.
ರಾಜ್ಯದಲ್ಲಿ ಕಳೆದ 40 ವರ್ಷಗಳಿಂದ ನಾನು ರಾಜಕಾರಣ ಮಾಡಿದರೂ ನನ್ನ ಮೇಲೆ ಯಾವುದೇ ಆಪಾದನೆ ಬಂದಿರಲಿಲ್ಲ. ರಾಜಕೀಯ ಷಡ್ಯಂತ್ರ ಮಾಡಿ ನನ್ನ ಮೇಲೆ ಕಿಡ್ನಾಪ್ ಕೇಸ್ ಹಾಕಿಸಿ ಬಂಧಿಸಿದ್ದಾರೆ ಎಂದು ಹೆಚ್.ಡಿ. ರೇವಣ್ಣ ಹೇಳಿದ್ದಾರೆ.

ಎಸ್‌ಐಟಿ ವಶದಲ್ಲಿರುವ ರೇವಣ್ಣ ಅವರ ಆರೋಗ್ಯದಲ್ಲಿ ಸಮಸ್ಯೆ ಕಂಡುಬಂದ ಹಿನ್ನೆಲೆಯಲ್ಲಿ ಅವರನ್ನು ಬೌರಿಂಗ್ ಆಸ್ಪತ್ರೆಗೆ ವೈದ್ಯಕೀಯ ತಪಾಸಣೆಗೆ ಕರೆದೊಯ್ಯಲಾಗಿತ್ತು. ಆಸ್ಪತ್ರೆ ಆವರಣದೊಳಗೆ ಪ್ರವೇಶ ಮಾಡುವ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನನ್ನ ಮೇಲೆ ಷಡ್ಯಂತ್ರ ಮಾಡಿ, ಕಿಡ್ನಾಪ್ ಕೇಸ್ ಹಾಕಿಸಿ ಬಂಧಿಸಿದ್ದಾರೆ ಎಂದು ಹೇಳಿಕೆ ನೀಡಿದ್ದಾರೆ.

ನನ್ನನ್ನು ಬಂಧನ ಮಾಡಿರುವುದರ ಹಿಂದೆ ರಾಜಕೀಯ ಷಡ್ಯಂತ್ರ ಮಾಡಲಾಗಿದೆ. ಕಳೆದ 40 ವರ್ಷದ ರಾಜಕಾರಣದಲ್ಲಿ ನನ್ನ ಮೇಲೆ ಯಾವುದೇ ಆಪಾದನೆ ಇಲ್ಲ. ಏ.28ರಂದು ನನ್ನ ಮೇಲೆ ದೂರು ಮಾಡಿಸಿದ್ದರು. ಆದರೆ, ಈ ಪ್ರಕರಣದಲ್ಲಿ ಯಾವುದೇ ಪುರಾವೆ ಸಿಕ್ಕಿರಲಿಲ್ಲ. ನನ್ನನ್ನು ಬಂಧಿಸಲೇಬೇಕು ಎಂಬ ದುರುದ್ದೇಶದಿಂದ ನನ್ನ ಮೇಲೆ ಕಿಡ್ನಾಪ್ ಕೇಸ್ ಹಾಕಿಸಿ ಅರೆಸ್ಟ್ ಮಾಡಿಸಿದ್ದಾರೆ. ನಾನು ಎಲ್ಲಾ ಪೂರ್ತಿ ವಿಷಯ ಹೇಳ್ತೀನಿ, ಇದು ರಾಜಕೀಯ ಷಡ್ಯಂತ್ರವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!