ಹೊಸದಿಗಂತ ಡಿಜಿಟಲ್ ಡೆಸ್ಕ್:
ಲೈಂಗಿಕ ದೌರ್ಜನ್ಯ ಪ್ರಕರಣ ಸಂಬಂಧ ಪ್ರಜ್ವಲ್ ರೇವಣ್ಣ ಎಸ್‌ಐಟಿ ವಿಚಾರಣೆ ವೇಳೆ ಸರಿಯಾಗಿ ಉತ್ತರಿಸುತ್ತಿಲ್ಲ ಎಂದು ತಿಳಿದು ಬಂದಿದೆ.
ಬೆಂಗಳೂರಿನ ಅರಮನೆ ರಸ್ತೆಯಲ್ಲಿರುವ ಸಿಐಡಿ ಕೇಂದ್ರ ಕಚೇರಿಯಲ್ಲಿ ಪ್ರಜ್ವಲ್ ಅನ್ನು ಎಸ್‌ಐಟಿ ತೀವ್ರವಾಗಿ ವಿಚಾರಣೆ ನಡೆಸುತ್ತಿದೆ. ಆದರೆ ತಮ್ಮ ಮೇಲಿನ ಅತ್ಯಾಚಾರ ಆರೋಪಗಳನ್ನು ಅವರು ನಿರಾಕರಿಸುತ್ತಿದ್ದಾರೆ ಎನ್ನಲಾಗಿದೆ.
ನನ್ನ ವಿರುದ್ಧ ರಾಜಕೀಯ ಪಿತೂರಿಯಿಂದ ಅತ್ಯಾಚಾರ ಪ್ರಕರಣಗಳು ದಾಖಲಾಗಿವೆ. ನಾನು ಯಾವುದೇ ತಪ್ಪು ಮಾಡಿಲ್ಲ. ನಾಲ್ಕು ವರ್ಷಗಳ ಬಳಿಕ ಅತ್ಯಾಚಾರ ದೂರು ಕೊಡಲು ಹಿಂದಿರುವ ಕಾರಣ ಪತ್ತೆ ಮಾಡುವಂತೆ ಅಧಿಕಾರಿಗಳಿಗೆ ಪ್ರಜ್ವಲ್ ಮನವಿ ಮಾಡಿರುವುದಾಗಿ ಗೊತ್ತಾಗಿದೆ.
ನಮ್ಮ ಮನೆಯಲ್ಲಿ ಹಲವು ಮಂದಿ ಕೆಲಸ ಮಾಡುತ್ತಿದ್ದರು. ನನಗೆ ಆ ಕೆಲಸಗಾರರ ಬಗ್ಗೆ ಮಾಹಿತಿ ಗೊತ್ತಿಲ್ಲ. ತಿರುಚಿದ ವಿಡಿಯೋಗಳನ್ನು ಹರಿ ಬಿಟ್ಟು ತೇಜೋವಧೆ ಮಾಡಿದ್ದಾರೆ. ಈ ವಿಡಿಯೋಗಳ ಹಿಂದಿರುವ ಕಾರ್ತಿಕ್ ಸೇರಿ ಇತರರನ್ನು ಬಂಧಿಸಿ ವಿಚಾರಿಸಿದರೆ ಸತ್ಯ ಗೊತ್ತಾಲಿದೆ ಎಂದಿದ್ದಾರೆ .
ಪ್ರಜ್ವಲ್‌ರನ್ನು 6 ದಿನಗಳು ವಿಚಾರಣೆ ಸಲು ವಾಗಿ ಎಸ್‌ಐಟಿ ವಶಕ್ಕೆ ಪಡೆದಿದ್ದು, ಮೊದಲ ದಿನದ ವಿಚಾರಣೆಗೆ ನಿರೀಕ್ಷಿತ ಪ್ರಮಾಣದಲ್ಲಿ ಅವರು ಸಹಕರಿಸಿಲ್ಲ ಎಂದು ತಿಳಿದುಬಂದಿದೆ. ಎರಡು ದಿನಗಳ ವಿಚಾರಣೆ ಬಳಿಕ ಅವರನ್ನು ಘಟನಾ ಸ್ಥಳಗಳ ಮಹಜರ್‌ಸಲುವಾಗಿ ಹಾಸನಕ್ಕೆ ಕರೆದೊಯ್ಯುಲು ಅಧಿಕಾರಿಗಳು ಮುಂದಾಗಿದ್ದಾರೆ.