ಹೊಸದಿಗಂತ ಡಿಜಿಟಲ್ ಡೆಸ್ಕ್:
ನಾನೀಗ ರಾಜಕೀಯದ ಅಂತ್ಯದಲ್ಲಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಚ್ಚರಿಯ ಹೇಳಿಕೆ ಒಂದನ್ನು ನೀಡಿದ್ದಾರೆ.
ಸತ್ತೇಗಾಲ ಸರ್ಕಾರಿ ಶಾಲಾ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ಚಾಮರಾಜನಗರಕ್ಕೆ 20 ಬಾರಿ ಬಂದಿದ್ದೇನೆ. ನಾನು ಚಾಮರಾಜನಗರಕ್ಕೆ ಬಂದಾಗಲೆಲ್ಲ ನನ್ನ ಅಧಿಕಾರ ಕಳೆದುಕೊಂಡಿಲ್ಲ. ಬದಲಾಗಿ ಸಿಎಂ ಕುರ್ಚಿ ಗಟ್ಟಿಯಾಗಿದೆ.
ನಾನೀಗ ರಾಜಕೀಯದ ಅಂತ್ಯದಲ್ಲಿದ್ದೇನೆ. ಜನರ ಪ್ರೀತಿ ಗಳಿಸದಿದ್ದರೆ ರಾಜಕೀಯದಲ್ಲಿ ಉಳಿಯುವುದು ಅಸಾಧ್ಯ ಎಂದು ಮಾರ್ಮಿಕವಾಗಿ ಮಾತನಾಡಿದ್ದಾರೆ.