ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಾಜಿ ಮುಖ್ಯಮಂತ್ರಿ, ಜೆಡಿಎಸ್ ಮುಖಂಡ ಎಚ್.ಡಿ. ಕುಮಾರಸ್ವಾಮಿ ಇಂದು ಮಧ್ಯಾಹ್ನ ಸಂಸದೆ ಸುಮಲತಾ ಅಂಬರೀಷ್ ಅವರನ್ನು ಭೇಟಿಯಾಗಲಿದ್ದಾರೆ.
ಈ ಸಂದರ್ಬ ಎಚ್‌ಡಿಕೆ, ಸುಮಲತಾ ಅವರನ್ನು ಬಿಜೆಪಿ-ಜೆಡಿಎಸ್ ಮೈತ್ರಿಯನ್ನು ಬೆಂಬಲಿಸುವಂತೆ ಮನವಿ ಮಾಡಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ಶನಿವಾರವಷ್ಟೇ ಸಂಸದೆ ಸುಮಲತಾ ಅಂಬರೀಶ್ ಅವರ ಬೆಂಗಳೂರಿನ ಮನೆಯಲ್ಲಿ ಬೆಂಬಲಿಗರ ಸಭೆ ನಡೆದಿತ್ತು. ಸಭೆಯಲ್ಲಿ ಪಕ್ಷೇತರವಾಗಿ ಮಂಡ್ಯದಲ್ಲಿ ಸ್ಪರ್ಧೆ ಮಾಡುವಂತೆ ಬೆಂಬಲಿಗರ ಒತ್ತಾಯ ಕೇಳಿಬಂದಿತ್ತು.
ಇದಕ್ಕೆ ಪ್ರತಿಕ್ರಿಯಿಸಿದ್ದ ಸುಮಲತಾ ಅಂಬರೀಶ್, ತಮ್ಮ ನಿರ್ಧಾರವನ್ನು ಏ.3ರಂದು ಸಭೆ ನಡೆಸಿ ಮಂಡ್ಯದಲ್ಲಿ ಪ್ರಕಟಿಸುವುದಾಗಿ ಹೇಳಿದ್ದರು. ಇದರ ಬೆನ್ನಲ್ಲೇ ಇಂದು ಎಚ್.ಡಿ. ಕುಮಾರಸ್ವಾಮಿ, ಸುಮಲತಾ ಅವರನ್ನು ಭೇಟಿಯಾಗುತ್ತಿದ್ದು, ಈ ಬೆಳವಣಿಗೆ ಕುತೂಹಲ ಕೆರಳಿಸಿದೆ.