ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಂದು ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 154ನೇ ಜನ್ಮದಿನ. ಜಯಂತಿ ಅಂಗವಾಗಿ ರಾಜ್‌ಘಾಟ್‌ನಲ್ಲಿರುವ ಗಾಂಧೀಜಿಯವರ ಸಮಾಧಿಗೆ ಆಗಮಿಸಿ ರಾಜಕೀಯ ಗಣ್ಯರು ನಮನ ಸಲ್ಲಸುತ್ತಿದ್ದಾರೆ. ರಾಜ್‌ಘಾಟ್ ಸುತ್ತಮುತ್ತ ಬಿಗಿ ಭದ್ರತೆ ಏರ್ಪಡಿಸಲಾಗಿದ್ದು, ಬಣ್ಣಬಣ್ಣದ ಹೂಗಳಿಂದ ಅಲಂಕರಿಸಲಾಗಿದೆ.
ಇಂದು ಬೆಳಗ್ಗೆಯೇ ಪ್ರಧಾನಿ ಮೋದಿಯವರು ರಾಜ್‌ಘಾಟ್‌ಗೆ ಆಗಮಿಸಿ ಮಹಾತ್ಮರ ಸಮಾಧಿಗೆ ಪುಷ್ಪನಮನ ಸಲ್ಲಿಸಿದರು. ಕೆಲಕಾಲ ಮೌನಾಚರಣೆಯನ್ನು ಪಾಲಿಸಿದರು.
ಲೋಕಸಭೆ ಸ್ಪೀಕರ್ ಓಂ ಬಿರ್ಲಾ ರಾಜ್‌ಘಾಟ್‌ನಲ್ಲಿರುವ ಮಹಾತ್ಮ ಗಾಂಧಿ ಸಮಾಧಿಗೆ ಗೌರವ ನಮನ ಸಲ್ಲಿಸಿದರು.
ದೆಹಲಿಯ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಕೂಡಾ ರಾಜ್‌ಘಾಟ್‌ಗೆ ತೆರಳಿ ಮಹಾತ್ಮ ಗಾಂಧಿ ಅವರಿಗೆ ಗೌರವ ಸಲ್ಲಿಸಿದರು
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ರಾಜ್‌ಘಾಟ್‌ನಲ್ಲಿರುವ ಮಹಾತ್ಮ ಗಾಂಧಿಯವರ ಸಮಾಧಿಗೆ ಪುಷ್ಪ ನಮನ ಸಲ್ಲಿಸಿದರು.